ಕಡಬ; ದ.ಕದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.30 ರ ತನಕ ಯಾವುದೇ ಸೇವೆಗಳು ನಡೆಯುವುದಿಲ್ಲ.
ಕೇವಲ ಶ್ರೀ ದೇವರ ದರ್ಶನಕ್ಕೆ ಮಾತ್ರ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ ಇರುವುದಿಲ್ಲ. ಶನಿವಾರ ಮತ್ತು ಆದಿತ್ಯವಾರ ವಾರಾಂತ್ಯದ ದಿನಗಳಲ್ಲಿ ಶ್ರೀ ದೇವರ ದರ್ಶನಕ್ಕೆ ಕೂಡಾ ಅವಕಾಶ ನಿರ್ಬಂಧಿಸಲಾಗಿದೆ ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.
إرسال تعليق