ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಾರಿನ ಟೈಯರ್ ಸ್ಫೋಟ; ದಂಪತಿಗಳು ಸಾವು

ಕಾರಿನ ಟೈಯರ್ ಸ್ಫೋಟ; ದಂಪತಿಗಳು ಸಾವು

 


ತುಮಕೂರು: ಕಾರಿನ ಟೈಯರ್ ಸ್ಪೋಟಗೊಂಡು ಸ್ಥಳದಲ್ಲೇ ಮಹಿಳೆ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.


ಶಿಲ್ಪ (32)ವರ್ಷ  ವಿನಾಯಕ ಸ್ವಾಮಿ(35) ವರ್ಷ ಮೃತ ದಂಪತಿಗಳು. ವ್ಯಾಗನಾರ್ ಕಾರಿನ ಟೈಯರ್ ಬ್ಲಾಸ್ಟ್ ಆಗಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.


ಕಾರ್‌ನಲ್ಲಿದ್ದ ದಂಪತಿಗಳಿಬ್ಬರೂ ಮೃತಪಟ್ಟಿದ್ದಾರೆ. ಇನ್ನು ಕಾರಿನಲ್ಲಿದ್ದ 5 ವರ್ಷದ ಮಗುವಿಗೆ ಗಂಭೀರವಾದ ಗಾಯಗಳಾಗಿವೆ.


 ಶಿರಾ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ದಂಪತಿಗಳು ಧಾರವಾಡದಿಂದ ಬೆಂಗಳೂರಿಗೆ ಬರುತ್ತಿದ್ದರು. 


ಕಾರಿನ ಟೈಯರ್ ಸ್ಫೋಟಗೊಂಡ ಪರಿಣಾಮ ಕಾರು ಪಲ್ಟಿ ಹೊಡೆದು ಈ ದುರಂತ ಸಂಭವಿಸಿದೆ.  ಶಿರಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

0 تعليقات

إرسال تعليق

Post a Comment (0)

أحدث أقدم