ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪೋಷಕರಿಂದ ಆನ್ಲೈನ್ ಕ್ಲಾಸ್ ಗೆ ತೊಂದರೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ

ಪೋಷಕರಿಂದ ಆನ್ಲೈನ್ ಕ್ಲಾಸ್ ಗೆ ತೊಂದರೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ

 


ಕಲಬುರಗಿ: ಪೋಷಕರಿಂದ ಆನ್ ಲೈನ್ ಕ್ಲಾಸ್​ಗೆ ತೊಂದರೆ ಆಯ್ತು ಅಂತ ಮನನೊಂದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ.


17 ವರ್ಷದ ಗುರುಚರಣ್ ಉಡುಪ ಆತ್ಮಹತ್ಯೆ ಮಾಡಿಕೊಂಡ ಯುವಕ.


ಗುರುಚರಣ್ ಉಡುಪಿಯ ಪ್ರತಿಷ್ಠಿತ ಕಾಲೇಜ್​ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದನು. ವಾಡಿ ಪಟ್ಟಣದ ಬಿರ್ಲಾ ಕ್ವಾಟರ್ಸ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮಾಹಿತಿ ತಿಳಿದು ಬಂದಿದೆ.


ಎರಡು ದಿನದ ಹಿಂದೆ ಆನ್ಲೈನ್ ಕ್ಲಾಸ್​ನಲ್ಲಿದ್ದಾಗ ಅವರ ತಂದೆ ತಾಯಿ ಡಿಸ್ಟರ್ಬ್​ ಮಾಡಿದ್ದಾರಂತೆ. ಈ ವೇಳೆ ಡಿಸ್ಟರ್ಬ್ ಮಾಡಬೇಡ ಅಮ್ಮಾ ಎಂದು ಹೇಳಿದ್ದಾನೆ ಎನ್ನಲಾಗಿದೆ. ನಂತರ ನೊಂದು ರೂಮಿ​ನೊಳಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.


ಈ ಪ್ರಕರಣ ಬಗ್ಗೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.  ಪೊಲೀಸ್ ತನಿಖೆ ಬಳಿಕ ಆತ್ಮಹತ್ಯೆಯ ಸತ್ಯಾಸತ್ಯತೆ ಬಯಲಾಗಲಿದೆ.


0 تعليقات

إرسال تعليق

Post a Comment (0)

أحدث أقدم