ಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ವೇಳೆಗೆ ಪಾದಚಾರಿಯೊಬ್ಬರು ಆನೆ ತುಳಿತಕ್ಕೆ ಬಲಿಯಾಗಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ದೊಡ್ಡಮೂಡಹಳ್ಳಿ ಬಳಿ ನಡೆದಿದೆ.
ದೊಡ್ಡಮೂಡಹಳ್ಳಿ ಗ್ರಾಮದ ಚಾಟಿನಿಂಗಯ್ಯ (52) ವರ್ಷ ಆನೆ ತುಳಿತಕ್ಕೆ ಬಲಿಯಾದವರು.
ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ್ದು, ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸ್ಥಳಕ್ಕೆ ಚಾಮರಾಜನಗರ ಪೂರ್ವ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Post a Comment