ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಗು ಕಿಡ್ನಾಪ್ ಮಾಡಿ ಮಾರಾಟ ಮಾಡಲು ಯತ್ನಿಸಿದ ಯುವಕ ಬಂಧನ

ಮಗು ಕಿಡ್ನಾಪ್ ಮಾಡಿ ಮಾರಾಟ ಮಾಡಲು ಯತ್ನಿಸಿದ ಯುವಕ ಬಂಧನ

 


ಬೆಂಗಳೂರು: ಮಗು ಕಿಡ್ನಾಪ್ ಮಾಡಿ ಮಾರಾಟ ಮಾಡಿದ್ದ ಆರೋಪಿಯನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ. ಕಾರ್ತಿಕ್ (24) ವರ್ಷ ಬಂಧಿತ ಆರೋಪಿ.


ಆರೋಪಿ ಕಾರ್ತಿಕ್​ ಕಳೆದ ವರ್ಷ ಕೂಡ ಬ್ಯಾಟರಾಯನಪುರದ ಶಾಮಣ್ಣ ಗಾರ್ಡನ್​ ಸಮೀಪದಲ್ಲಿ ಪರಿಚಿತರ ಮಗುವನ್ನೇ ಅಪಹರಣ ಮಾಡಿ ಹೊಸೂರು ಬಳಿಯ ಯಮರೆ ಗ್ರಾಮದ ನಿವಾಸಿಗೆ 60 ಸಾವಿರ ರೂಪಾಯಿಗೆ ಮಾರಾಟ ಮಾಡಿದ್ದ ಎನ್ನಲಾಗಿದೆ.


ಘಟನೆ ಬಗ್ಗೆ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. 


ಕಳೆದ ಒಂದು ವರ್ಷದಿಂದ ಆರೋಪಿ ಮೇಲೆ ಕಣ್ಣಿಟ್ಟಿದ್ದ ಪೊಲೀಸರು, ಇತ್ತೀಚೆಗೆ ಮಗು ಮಾರಾಟ ಸುಳಿವು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ.


ಸದ್ಯ ಮಗುವನ್ನು ಸಿಡಬ್ಲ್ಯೂಸಿನಲ್ಲಿ ಇರಿಸಲಾಗಿದ್ದು, ಕಾನೂನು ಪ್ರಕ್ರಿಯೆ ಬಳಿಕ ಪೊಲೀಸರು ಪೋಷಕರ ಮಡಿಲಿಗೆ ಒಪ್ಪಿಸಲಿದ್ದಾರೆ.

0 تعليقات

إرسال تعليق

Post a Comment (0)

أحدث أقدم