ಕುಶಾಲನಗರ: ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಹಾರಂಗಿಯಲ್ಲಿ ಭಾನುವಾರ ನಡೆದಿದೆ.
ಕೂಡುಮಂಗಳೂರಿನ ಜನತಾ ಕಾಲೋನಿಯ ಚರಣ್ (26) ವರ್ಷ ಮೃತ ಯುವಕ.
ಚರಣ್ ವೃತ್ತಿಯಲ್ಲಿ ವಿದ್ಯುತ್ ಕಾರ್ಮಿಕನಾಗಿದ್ದು, ಭಾನುವಾರ ಮಧ್ಯಾಹ್ನದ ವೇಳೆ ಹಾರಂಗಿಗೆ ತೆರಳಿದ ಚರಣ್ ವಿಷ ಸೇವಿಸಿದ್ದಾರೆ.
ಸ್ಥಳೀಯರ ಸಹಕಾರದಿಂದ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ತೆರಳುವ ವೇಳೆ ಹುಣಸೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ.
ಆತ್ಮಹತ್ಯೆಗೆ ನಿಜವಾದ ಕಾರಣ ಏನೆಂಬುದು ತಿಳಿದು ಬಂದಿಲ್ಲ.
ಈ ಬಗ್ಗೆ ಕುಶಾಲನಗರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶವ ಪರೀಕ್ಷೆಯ ನಂತರ ಮೃತದೇಹವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ.
Post a Comment