ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಯುವತಿಗೆ ಚಾಕುವಿನಿಂದ ಇರಿದ ಬಳಿಕ ಯುವಕ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆ

ಯುವತಿಗೆ ಚಾಕುವಿನಿಂದ ಇರಿದ ಬಳಿಕ ಯುವಕ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆ

 


ಉಡುಪಿ: ಯುವಕನೊಬ್ಬ ಯುವತಿಗೆ ಚೂರಿಯಿಂದ ಇರಿದು, ಬಳಿಕ ತಾನು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೊಂದು ಜಿಲ್ಲೆಯ ಸಂತೆಕಟ್ಟೆ ಸಮೀಪದ ರೋಬೋಸಾಫ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. 


ಆ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ಸೌಮ್ಯಶ್ರೀ ವಿಠಲ ಭಂಡಾರಿ (28) ವರ್ಷ ಚಿಕಿತ್ಸೆಗೆ ಸ್ಪಂದಿಸದೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.


 ಸೌಮ್ಯಶ್ರೀ ಸ್ಕೂಟರ್ ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಬೈಕ್ ನಲ್ಲಿ ಬಂದ ಸಂದೇಶ್ ಏಕಾಏಕಿ ಜಾಕುವಿನಿಂದ ಇರಿದಿದ್ದಾನೆ.  


ಬಳಿಕ ತಾನೂ ಕುತ್ತಿಗೆಗೆ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಇಬ್ಬರನ್ನು ಸ್ಥಳದಲ್ಲಿದ್ದವರು ಆಸ್ಪತ್ರೆಗೆ ದಾಖಲಿಸಿರುವುದಾಗಿ ಮಾಹಿತಿ ತಿಳಿದು ಬಂದಿದೆ.


ಯುವಕ ಸಂದೇಶ್ ಕುಲಾಲ್ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರೇಮ ವೈಫಲ್ಯ ಕೃತ್ಯಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.


ಸೌಮ್ಯಶ್ರೀ ಮತ್ತು ಸಂದೇಶ ಕಳೆದ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ, ಕೆಲ ದಿನಗಳ ಹಿಂದೆ ಸೌಮ್ಯಶ್ರೀ ಯವರಿಗೆ ಬೇರೆಯವರೊಂದಿಗೆ ನಿಶ್ಚಿತಾರ್ಥ ಆಗಿತ್ತು. ಇದರಿಂದ ಕೋಪಗೊಂಡ ಸಂದೇಶ್ ಸೌಮ್ಯಶ್ರೀ ಜೊತೆಗೆ ಜಗಳ ಮಾಡಿಕೊಂಡಿದ್ದ ಎನ್ನಲಾಗಿದೆ.


0 Comments

Post a Comment

Post a Comment (0)

Previous Post Next Post