ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪುಂಜಾಲಕಟ್ಟೆ: 'ಯುವಶಕ್ತಿ' ಕಾರ್ಯಕ್ರಮ

ಪುಂಜಾಲಕಟ್ಟೆ: 'ಯುವಶಕ್ತಿ' ಕಾರ್ಯಕ್ರಮ


ಪುಂಜಾಲಕಟ್ಟೆ: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾಲಯ, ರಾಷ್ಟ್ರೀಯ ಸೇವಾಯೋಜನೆ ಘಟಕ1 ಮತ್ತು 2 ಇದರ ಆಶ್ರಯದಲ್ಲಿ ಸದ್ಬಾವನಾ ದಿನದ ಅಂಗವಾಗಿ “ಯುವ ಶಕ್ತಿ” ಎಂಬ ಕಾರ್ಯಕ್ರಮವು ಗೂಗಲ್ ಮೀಟ್ ಮಾಧ್ಯಮದಲ್ಲಿ ನಡೆಯಿತು.


ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಅಕ್ಷತಾ ಬಜಪೆ, ಜೀವನ ಕೌಶಲ ತರಬೇತುದಾರರು, ಮನಶಾಸ್ತ್ರಜ್ಞರು, ನಿಮಾನ್ಸ ಬೆಂಗಳೂರು ಇವರು ಸದ್ಭಾವನೆಯ ಮಹತ್ವವನ್ನು ತಿಳಿಸುವುದರ ಮೂಲಕ ಯುವಶಕ್ತಿಯನ್ನು ಪ್ರೇರೇಪಿಸಿ ಕಾರ್ಯಕ್ರಮವನ್ನು ಅರ್ಥ ಪೂರ್ಣವಾಗಿಸಿದರು.


ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಗಣಪತಿ ಭಟ್ ಕುಳಮರ್ವ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಐಕ್ಯೂಎಸಿ ಸಂಚಾಲಕರಾದ ಪ್ರೊ.ರವಿಶಂಕರ್ ಬಿ. ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಯೋಜನೆಯ ಯೋಜನಾಧಿಕಾರಿಗಳಾದ ಪ್ರೊ.ಸಂತೋಷ್ ಪ್ರಭು ಹಾಗೂ  ಪ್ರೊ.ಎಚ್ ಎಸ್ ರಾಜೇಶ್ವರಿ ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.  


ಈ ಕಾರ್ಯಕ್ರಮವನ್ನು ರಾಷ್ಟ್ರೀಯ ಸೇವಾಯೋಜನೆಯ ಸ್ವಯಂಸೇವಕಿಯಾದ ಕು. ರಾಜೇಶ್ವರಿ ಇವರ ನಿರೂಪಿಸಿದರ ಹಾಗೂ ಸ್ವಾಗತಿಸಿದರು. ಕು.ಜನಿತಾ ಇವರು  ಧನ್ಯವಾದವಿತ್ತರು. ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸುಮಾರು 50 ಸ್ವಯ೦ಸೇವಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post