ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅಸಂಘಟಿತ ಪುರೋಹಿತ ಕಾರ್ಮಿಕರು ಹಾಗೂ ಅಡುಗೆ ವರ್ಗದವರಿಗೆ ಸವಲತ್ತು ಒದಗಿಸಲು ಮುಖ್ಯಮಂತ್ರಿಗೆ ಮನವಿ ಸಲ್ಲಿಕೆ

ಅಸಂಘಟಿತ ಪುರೋಹಿತ ಕಾರ್ಮಿಕರು ಹಾಗೂ ಅಡುಗೆ ವರ್ಗದವರಿಗೆ ಸವಲತ್ತು ಒದಗಿಸಲು ಮುಖ್ಯಮಂತ್ರಿಗೆ ಮನವಿ ಸಲ್ಲಿಕೆ



ಮಂಗಳೂರು: ಕರ್ನಾಟಕ ರಾಜ್ಯ ಅಸಂಘಟಿತ ಪುರೋಹಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ- ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಘಟಕದ ವತಿಯಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಅಸಂಘಟಿತ ಪುರೋಹಿತ ವರ್ಗ ಮತ್ತು ಅಡುಗೆ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಲಾಯಿತು.


ಕೋವಿಡ್ ಸಂಕಷ್ಟ ಕಾಲದಲ್ಲಿ ಈ ಕಾರ್ಮಿಕ ವರ್ಗಗಳು ಜೀವನಾಧಾರವಿಲ್ಲದೆ ಎದುರಿಸುವ ಸಮಸ್ಯೆ ಗಂಭೀರವಾಗಿದ್ದು, ಸರಕಾರದಿಂದ ಸವಲತ್ತುಗಳನ್ನು ಒದಗಿಸುವಂತೆ ಮುಖ್ಯಮಂತ್ರಿಗಳು, ಸಚಿವರು ಮತ್ತು ಜಿಲ್ಲೆಯ ಶಾಸಕರುಗಳಿಗೆ ಮನದಟ್ಟು ಮಾಡಿಸಲಾಯಿತು.


ಕರ್ನಾಟಕ ರಾಜ್ಯ ಅಸಂಘಟಿತ ಪುರೋಹಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಕೇಂದ್ರ ಅಧ್ಯಕ್ಷರಾದ ವೇ.ಬ್ರ. ಅನಂತ ಮೂರ್ತಿ ಹಾಗೂ ಇತರ ಕೇಂದ್ರ ಪದಾಧಿಕಾರಿಗಳ ಮಾರ್ಗದರ್ಶನದಂತೆ ದ.ಕ ಜಿಲ್ಲಾ ಘಟಕದ ವತಿಯಿಂದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು ಎಂದು ಜಿಲ್ಲಾ ಘಟಕದ ಅಧ್ಯಕ್ಷರಾದ ವಿ. ಪ್ರಕಾಶ್ ಹೊಳ್ಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಮುಖ್ಯಮಂತ್ರಿ ಬೊಮ್ಮಾಯಿ ಅವರು ಗುರುವಾರ ಮಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಮನವಿ ಸಲ್ಲಿಸಲಾಗಿದೆ. ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಘಟಕದ ಪದಾಧಿಕಾರಿಗಳು ನಿಯೋಗದಲ್ಲಿದ್ದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم