ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ಗಣಿತ ಉಪನ್ಯಾಸಕರಾಗಿ ಹರೀಶ ಭಟ್ ನಿಯುಕ್ತಿಗೊಂಡಿದ್ದಾರೆ. 1987 ರಿಂದ 2019 ರವರೆಗೆ ಸುಮಾರು 33 ವರ್ಷಗಳ ಕಾಲ ವಿವೇಕಾನಂದ ತಾಂತ್ರಿಕ ವಿದ್ಯಾಲಯದಲ್ಲಿ ಗಣಿತ ಉಪನ್ಯಾಸಕರಾಗಿ ಹಾಗೂ ಬಳಿಕ ಎರಡು ವರ್ಷಗಳ ಕಾಲ ಉಪ್ಪಿನಂಗಡಿಯ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನಲ್ಲಿ ಸೇವೆ ಸಲ್ಲಿಸಿದ್ದರು.
ಇವರು ಪಡ್ನೂರಿನ ವಾಸುದೇವ ಭಟ್ ಮತ್ತು ಸುಂದರಿ ಅಮ್ಮನವರ ಪುತ್ರ. ಯಕ್ಷಗಾನದಲ್ಲಿ ವಿಶೇಷ ಪ್ರಾವೀಣ್ಯತೆಯನ್ನು ಪಡೆದಿರುವ ಇವರು ಗಣಿತ ವಿಷಯದಲ್ಲಿ ಕೋಚಿಂಗ್ ತರಗತಿಯನ್ನು ನೀಡುತ್ತಾ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕರಾಗಿದ್ದಾರೆ. ಇವರ ಸೇವೆ ಇನ್ನು ಮುಂದಕ್ಕೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಲಭ್ಯವಾಗಲಿದೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment