ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್‌ಕ್ರಾಸ್ ಘಟಕ ಮತ್ತು ವಿಶ್ವವಿದ್ಯಾನಿಲಯ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕಗಳು ಜಂಟಿಯಾಗಿ, ವೆನ್ಲಾಕ್ ಜಿಲ್ಲಾಸ್ಪತ್ರೆಯ ಸಹಯೋಗದೊಂದಿಗೆ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಶುಕ್ರವಾರ ವಿದ್ಯಾರ್ಥಿಗಳಿಗೆ ಎರಡನೇ ಡೋಸ್ ಕೊವ್ಯಾಕ್ಸಿನ್ ಲಸಿಕೆ ನೀಡಿಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದವು. ಸುಮಾರು 300 ಕ್ಕೂ ಹೆಚ್ಚು ವಿದ್ಯಾರ್ಥಿಗಳು (ಪದವಿ ಮತ್ತು ಸ್ನಾತಕೋತ್ತರ ಪದವಿ) ಲಸಿಕೀಕರಣದ ಲಾಭ ಪಡೆದುಕೊಂಡರು.
ಈ ವೇಳೆ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ, ವಿಶ್ವವಿದ್ಯಾನಿಲಯದ ಯುವ ರೆಡ್‌ಕ್ರಾಸ್ ನೋಡಲ್ ಅಧಿಕಾರಿ ಡಾ. ಗಣಪತಿ ಗೌಡ, ವಿವಿ ಕಾಲೇಜಿನ ಯುವ ರೆಡ್‌ಕ್ರಾಸ್ ಕಾರ್ಯಕ್ರಮ ಅಧಿಕಾರಿ ಡಾ. ಕುಮಾರಸ್ವಾಮಿ ಎಂ ಮತ್ತು ರೆಡ್‌ಕ್ರಾಸ್ ವಿದ್ಯಾರ್ಥಿ ಸ್ವಯಂಸೇವಕರು ಸಕ್ರಿಯವಾಗಿ ಪಾಲ್ಗೊಂಡರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق