ಮಂಗಳೂರು: ರೈಲು ಹಳಿ ದಾಟುತ್ತಿದ್ದ ವೇಳೆ ರೈಲು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಮೃತಪಟ್ಟ ಘಟನೆಯೊಂದು ನಗರದ ಜಪ್ಪು ಮಹಾಕಾಳಿಪಡ್ಪು ಬಳಿ ಶನಿವಾರ ಬೆಳಿಗ್ಗೆ ನಡೆದಿದೆ.
ಸ್ಥಳೀಯ ನಿವಾಸಿಗಳಾದ ವಸಂತಿ (50 ವ) ಮತ್ತು ಪ್ರೇಮಾ (48 ವ) ಮೃತಪಟ್ಟ ಮಹಿಳೆಯರು.
ಬೀಡಿ ಕಾರ್ಮಿಕರಾಗಿದ್ದ ಇವರಿಬ್ಬರು ದಿನನಿತ್ಯ ಕುಡುಪ್ಪಾಡಿ ದೋಟ ಎಂಬಲ್ಲಿಂದ ಮಹಾಕಾಳಿಪಡ್ಪುವಿನಲ್ಲಿರುವ ಬ್ರ್ಯಾಂಚ್ ಗೆ ರೈಲು ಹಳಿಯನ್ನು ದಾಟಿ ಬೀಡಿ ಕೊಂಡೊಯ್ಯುತ್ತಿದ್ದರು.
ಹಾಗೆಯೇ ಇಂದು ಬೆಳಿಗ್ಗೆಯೂ ಬೀಡಿ ಕೊಂಡೊಯ್ಯುವ ವೇಳೆ ಹಳಿ ದಾಟುತ್ತಿದ್ದಾಗ ಕೇರಳ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ರೈಲಿನಡಿಗೆ ಸಿಲುಕಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ರೈಲ್ವೆ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
Post a Comment