ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಉಪ್ಪಿನಂಗಡಿ ಮೀನಿನ ಅಂಗಡಿಗೆ ಬೆಂಕಿ

ಉಪ್ಪಿನಂಗಡಿ ಮೀನಿನ ಅಂಗಡಿಗೆ ಬೆಂಕಿ

 



ಉಪ್ಪಿನಂಗಡಿ : ಬೆಂಕಿ ಅವಘಡದಲ್ಲಿ ಮೀನಿನ ಅಂಗಡಿ ಹೊತ್ತಿ ಉರಿದಿರುವ ಘಟನೆಯೊಂದು ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಸುಬ್ರಹ್ಮಣ್ಯ ಕ್ರಾಸ್ ಬಳಿ ನಡೆದಿದೆ.


ಪುತ್ತೂರಿನ ಅಶೋಕ್ ಶೆಟ್ಟಿ ಎಂಬವರಿಗೆ ಸೇರಿದ ಮೀನಿನ ಅಂಗಡಿ ನಿನ್ನೆ ಮಧ್ಯರಾತ್ರಿ ಸಂಪೂರ್ಣ ಬೆಂಕಿಗಾಹುತಿಯಾಗಿದೆ.


ಈ ದುರಂತದಲ್ಲಿ ಮೀನು ಸಂಗ್ರಹದ ಬಾಕ್ಸ್ ಗಳು ಸೇರಿದಂತೆ ಅಂಗಡಿಯಲ್ಲಿದ್ದ ಎಲ್ಲಾ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.


ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



0 تعليقات

إرسال تعليق

Post a Comment (0)

أحدث أقدم