ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬಂಟ್ವಾಳ ಘಟಕದಲ್ಲಿ ಸಸಿ ನೆಡುವ ಕಾರ್ಯಕ್ರಮ

ಬಂಟ್ವಾಳ ಘಟಕದಲ್ಲಿ ಸಸಿ ನೆಡುವ ಕಾರ್ಯಕ್ರಮ



ಮಂಗಳೂರು: ಗೃಹರಕ್ಷಕ ದಳ ಬಂಟ್ವಾಳ ಘಟಕದ ವತಿಯಿಂದ ಭಾನುವಾರ (ಆ.1) ಬಿ.ಸಿ ರೋಡ್ ಗೃಹರಕ್ಷಕದಳ ಕಛೇರಿಯ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಾಗೂ ಸಸಿ ಹಂಚುವ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅಧ್ಯಕ್ಷತೆಯನ್ನು ವಹಿಸಿದರು.


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರೆಗೆ ಈ ವರ್ಷದಲ್ಲಿ ಸುಮಾರು 1000 ಸಸಿಗಳನ್ನು ನೆಡುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಈ ವರೆಗೆ ಸುಮಾರು 800 ಗಿಡಗಳನ್ನು ನೆಡಲಾಗಿದೆ. ಗಿಡ ನೆಟ್ಟು ಹಸಿರು ಬೆಳೆಸಿದಲ್ಲಿ ಆರೋಗ್ಯ ಪೂರ್ಣ ಸಮಾಜ ನಿರ್ಮಾಣವಾಗಲಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಸಿಗಳನ್ನು ನೆಡುವ ಕಾರ್ಯ ಯೋಜನೆ ಸಿದ್ದಪಡಿಸಲಾಗಿದೆ ಎಂದು ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ನುಡಿದರು.


ಗೃಹರಕ್ಷಕದಳದ ಕಛೇರಿ ಆವರಣದಲ್ಲಿ 25 ಗಿಡಗಳನ್ನು ನೆಡಲಾಯಿತು. ಗಿಡಗಳನ್ನು ನೆಡುವುದರ ಜೊತೆಗೆ ಗೃಹರಕ್ಷಕರಿಗೆ ಉಚಿತವಾಗಿ ಸಸಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ಘಟಕದ ಘಟಕಾಧಿಕಾರಿಯಾದ ಐತಪ್ಪ ಹಾಗೂ ಗೃಹರಕ್ಷಕ ಮತ್ತು ಗೃಹರಕ್ಷಕಿಯರು ಉಪಸ್ಥಿತರಿದ್ದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post