ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಗಣೇಶ ಮೂರ್ತಿ ವಿಸರ್ಜನೆ ವೇಳೆ ಮೂವರು ನೀರುಪಾಲು

ಗಣೇಶ ಮೂರ್ತಿ ವಿಸರ್ಜನೆ ವೇಳೆ ಮೂವರು ನೀರುಪಾಲು

 


ಮುಂಬೈ: ಭಾನುವಾರ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ವೇಳೆಯಲ್ಲಿ ಮೂವರು ಹುಡುಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ.


ಮುಂಬೈನ ವರ್ಸೋವಾ ಬೀಚ್‌ನಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ನೀರಿನಲ್ಲಿ ಮುಳುಗಿದ್ದಾರೆ ಎಂದು ಶಂಕಿಸಲಾದ ಹುಡುಗರ ಶೋಧ ಕಾರ್ಯ ನಡೆಯುತ್ತಿದೆ. ಅವರ ಜೊತೆಯಲ್ಲಿದ್ದ ಇನ್ನಿಬ್ಬರನ್ನು ರಕ್ಷಿಸಲಾಗಿದೆ


ಗಣೇಶ ವಿಸರ್ಜನೆ ವೇಳೆ ಐವರು ಹುಡುಗರು ನೀರು ಪಾಲಾಗಿದ್ದಾರೆ ಎಂದು ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಮಾಹಿತಿ ದೊರಕಿದ್ದು, ಘಟನಾ ಸ್ಥಳಕ್ಕೆ ನಾವು ಅರ್ಧ ಗಂಟೆಯಲ್ಲಿ ತಲುಪಿದೆವು. ಇಬ್ಬರು ಯುವಕರನ್ನು ರಕ್ಷಣೆ ಮಾಡಲಾಗಿದೆ. ಉಳಿದ ಮೂವರಿಗಾಗಿ ನಮ್ಮ ತಂಡವು ಶೋಧ ಕಾರ್ಯ ಮುಂದುವರೆಸಿದೆ ಎಂದು ಅಧಿಕಾರಿ ಹೇಳಿದ್ದಾರೆ.

0 Comments

Post a Comment

Post a Comment (0)

Previous Post Next Post