ರಾಯ್ಗಂಜ್ : ವಾಹನವೊಂದು ಡಿಕ್ಕಿ ಹೊಡೆದು ಖಾಸಗಿ ಬಸ್ ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಪರಿಣಾಮ, 6 ಮಂದಿ ವಲಸೆ ಕಾರ್ಮಿಕರು ಸಾವಿಗೀಡಾದ ಘಟನೆಯೊಂದು ಬುಧವಾರ ರಾತ್ರಿ ವೇಳೆಯಲ್ಲಿ ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ್ ಜಿಲ್ಲೆಯ ರಾಯ್ಗಂಜ್ನಲ್ಲಿ ನಡೆದಿದೆ.
ಪಶ್ಚಿಮ ಬಂಗಾಳ ಹಾಗೂ ಜಾರ್ಖಾಂಡ್ ರಾಜ್ಯದ ವಿವಿಧ ಜಿಲ್ಲೆಗಳಿಂದ 20 ಮಂದಿ ವಲಸೆ ಕಾರ್ಮಿಕರನ್ನು ಹೊತ್ತ ಖಾಸಗಿ ಬಸ್ ವೊಂದು ಉತ್ತರಪ್ರದೇಶದ ಲಖನೌಗೆ ತೆರಳುತ್ತಿತ್ತು.
ರಾಯ್ ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ರುಪಾಹರ್'ನ ರಾಷ್ಟ್ರೀಯ ಹೆದ್ದಾರಿ-34ರಲ್ಲಿ ಬಸ್ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದಿದೆ ಎಂದು ತಿಳಿದುಬಂದಿದೆ.
ಘಟನೆ ನಡೆದ ಸ್ಥಳಕ್ಕೆ ಸ್ಥಳೀಯ ನಿವಾಸಿಗಳು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ, ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, 6 ಮಂದಿ ಶವಗಳನ್ನು ಹೊರಗೆ ತೆಗೆದಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿರುವವರನ್ನು ರಾಯ್ಗಂಜ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
إرسال تعليق