ಮೀರತ್: ಅಕ್ರಮ ಸಂಬಂಧದ ಅನುಮಾನದ ಹಿನ್ನೆಲೆ ಫೋನಿನಲ್ಲಿ ಮಾತನಾಡುತ್ತಿದ್ದ 36 ವರ್ಷದ ಪತ್ನಿಯನ್ನೇ ಪತಿ ಗುಂಡಿಕ್ಕಿ ಹತ್ಯೆಗೈದಿರುವ ಘಟನೆಯೊಂದು ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ.
ಮೃತ ಮಹಿಳೆ ಶಮಾ ಸಹೋದರ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ
ಫಾಝಿಲ್ ಬಂಧಿತ ಆರೋಪಿ. ಶುಕ್ರವಾರ ತಡರಾತ್ರಿ ಶಮಾ ದೂರವಾಣಿಯಲ್ಲಿ ಮಾತನಾಡುತ್ತಿದ್ದಳು. ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಪತ್ನಿಗೆ ಗುಂಡಿಕ್ಕಿದ್ದಾನೆ.
ಗುಂಡಿನ ಸದ್ದು ಕೇಳಿದ ಶಮಾ ಸಹೋದರ ಫರ್ಹಾ ನೆರೆಹೊರೆಯವರಿಗೆ ತಿಳಿಸಿದ್ದಾನೆ. ಕೂಡಲೇ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಇವರಿಬ್ಬರು ಕೇವಲ 7 ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು.
Post a Comment