ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಲಾರಿ ಮತ್ತು ಕ್ಯಾಂಟರ್ ನಡುವೆ ಭೀಕರ ಅಪಘಾತ; ಮೂರು ಜನ ಹಾಗೂ ಎಂಟು ಎಮ್ಮೆ ಸಾವು

ಲಾರಿ ಮತ್ತು ಕ್ಯಾಂಟರ್ ನಡುವೆ ಭೀಕರ ಅಪಘಾತ; ಮೂರು ಜನ ಹಾಗೂ ಎಂಟು ಎಮ್ಮೆ ಸಾವು

 


ಕೋಲಾರ: ತಾಲ್ಲೂಕಿನ ರೋಣಿಹಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಮಂಗಳವಾರ ಸಂಜೆ ಲಾರಿ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂರು ಜನ ಮತ್ತು ಎಂಟು ಎಮ್ಮೆಗಳು ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.


ಸೇಬು ತುಂಬಿದ ಲಾರಿ ಹಾಗೂ ಎಮ್ಮೆಗಳನ್ನು ಸಾಗಾಟ ಮಾಡುತ್ತಿದ್ದ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡೂ ವಾಹನಗಳಲ್ಲಿದ್ದ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.


ಕ್ಯಾಂಟರ್‌ನಲ್ಲಿ ಸಾಗಿಸಲಾಗುತ್ತಿದ್ದ 19 ಎಮ್ಮೆಗಳ ಪೈಕಿ 8 ಎಮ್ಮೆಗಳು ಸ್ಥಳದಲ್ಲೇ ಸಾವಿಗೀಡಾಗಿವೆ. ಹಾಗೂ 11 ಎಮ್ಮೆಗಳು ಗಾಯಗೊಂಡಿವೆ.


ಕ್ಯಾಂಟರ್‌ನಲ್ಲಿ ಸಿಲುಕಿಕೊಂಡಿದ್ದ ಇಬ್ಬರನ್ನು ಹಾಗೂ ಎಮ್ಮೆಗಳನ್ನು ಪೊಲೀಸರು ಸ್ಥಳೀಯರ ಸಹಕಾರದಿಂದ ಹೊರ ತೆಗೆದರು. 


ಲಾರಿಯಲ್ಲಿ ಸಿಲುಕಿಕೊಂಡಿದ್ದ ಇಬ್ಬರನ್ನು ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸುಮಾರು ಮೂರು ಗಂಟೆಗಳ ಕಾರ್ಯಾಚರಣೆ ನಡೆಸಿ ಹೊರ ತೆಗೆದರು.


ಈ ಅಪಘಾತದಲ್ಲಿ ಸಾವಿಗೀಡಾದ ವ್ಯಕ್ತಿಗಳ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

0 تعليقات

إرسال تعليق

Post a Comment (0)

أحدث أقدم