ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಫ್ಲೈ ಓವರ್ ಮೇಲೆ ಓವರ್ ಟೇಕ್ ಮಾಡುವ ಭರದಲ್ಲಿ ಅಪಘಾತ; ಇಬ್ಬರು ಸಾವು

ಫ್ಲೈ ಓವರ್ ಮೇಲೆ ಓವರ್ ಟೇಕ್ ಮಾಡುವ ಭರದಲ್ಲಿ ಅಪಘಾತ; ಇಬ್ಬರು ಸಾವು

 


ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಭೀಕರ ಅಪಘಾತ ನಡೆದಿದ್ದು, ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದ ಇಬ್ಬರ ದೇಹಗಳು ಛಿದ್ರಗೊಂಡಿವೆ.


ಫ್ಲೈ ಓವರ್ ಮೇಲೆ ಓವರ್ ಟೇಕ್​ ಮಾಡುವ ಭರದಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ವೇಗವಾಗಿ ಬಂದ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನಕ್ಕೂ ಅಪ್ಪಳಿಸಿದೆ.


ಕಾರು ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ಕಾರು ಕೂಡ ಸಂಪೂರ್ಣ ಜಖಂಗೊಂಡಿದ್ದು, ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಬಂದು ಪರಿಶೀಲನೆ ನಡೆಸುತ್ತಿದ್ದಾರೆ. 


0 Comments

Post a Comment

Post a Comment (0)

Previous Post Next Post