ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಭೀಕರ ಅಪಘಾತ ನಡೆದಿದ್ದು, ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದ ಇಬ್ಬರ ದೇಹಗಳು ಛಿದ್ರಗೊಂಡಿವೆ.
ಫ್ಲೈ ಓವರ್ ಮೇಲೆ ಓವರ್ ಟೇಕ್ ಮಾಡುವ ಭರದಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ವೇಗವಾಗಿ ಬಂದ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನಕ್ಕೂ ಅಪ್ಪಳಿಸಿದೆ.
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಾರು ಕೂಡ ಸಂಪೂರ್ಣ ಜಖಂಗೊಂಡಿದ್ದು, ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಬಂದು ಪರಿಶೀಲನೆ ನಡೆಸುತ್ತಿದ್ದಾರೆ.
إرسال تعليق