ಪುತ್ತೂರು : ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ಭೇಟಿಯಾಗಲು ಬಂದ ಯುವಕನಿಗೆ ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಹಲ್ಲೆ ನಡೆಸಿದ ಪ್ರಕರಣದ ಬಗ್ಗೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಕುರಿಯ ನಿವಾಸಿ ಫಾರೂಕ್ (32) , ಬಲ್ನಾಡು ನಿವಾಸಿ ಅಬ್ದುಲ್ ಮಜೀದ್ ( 21) ಎಂದು ಗುರುತಿಸಲಾಗಿದೆ.
ಸ್ನ್ಯಾಪ್ ಚ್ಯಾಟ್ ಮೂಲಕ ಪರಿಚಯವಾದ ಪುತ್ತೂರಿನ ಅನ್ಯಕೋಮಿನ ಯುವತಿಯ ಭೇಟಿಯಾಗಲು ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದ ರಾಯಚೂರಿನ ಯುವಕ ಹನುಮಂತರಾಯ ಮತ್ತು ಆತನ ಸ್ನೇಹಿತನ ಮೇಲೆ 6 ಜನರಿಂದ ತಂಡವೊಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದರು.
ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ಹಲ್ಲೆ ನಡೆಸಿದ್ದ ತಂಡದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.
Post a Comment