ಮೈಸೂರು: ಎರಡು ಕಾರುಗಳು ಮಧ್ಯೆ ಅಪಘಾತ ಸಂಭವಿಸಿದ್ದು, ಘಟನೆ ಹಾರ್ಡಿಂಜ್ ಸರ್ಕಲ್ ನಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಎರಡು ಕಾರುಗಳ ಮಾಲೀಕರು ಕಾರುಗಳನ್ನು ಸ್ಥಳದಲ್ಲಿಯೇ ಬಿಟ್ಟು ತೆರಳಿದ್ದು, ದೇವರಾಜ ಸಂಚಾರಿ ಠಾಣೆಯ ಪೊಲೀಸರು ಎರಡು ಕಾರನ್ನು ವಶಕ್ಕೆ ಪಡೆದು ಠಾಣೆಗೆ ಕೊಂಡೊಯ್ದು ನಿಲ್ಲಿಸಿದ್ದಾರೆ.
ಬನ್ನೂರು ರಸ್ತೆಯಿಂದ ಅತಿವೇಗದಲ್ಲಿ ಬರುತ್ತಿದ್ದ ಕಾರು ಮತ್ತು ಮೈಸೂರು-ಬೆಂಗಳೂರು ರಸ್ತೆಯಿಂದ ಬರುತ್ತಿದ್ದ ಕಾರು ಪರಸ್ಪರ ಡಿಕ್ಕಿ ಹೊಡೆದಿದೆ.
ಕಾರಿನಲ್ಲಿದ್ದವರು ಮದ್ಯದ ಅಮಲಿನಲ್ಲಿದ್ದರೆಂದು ಕಾಣಿಸುತ್ತಿದ್ದರೆಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇದೀಗ ಕಾರು ಯಾರಿಗೆ ಸೇರಿದ್ದು ಎಂಬುದನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ.
Post a Comment