ಮೂಡುಬಿದಿರೆ: ವಿದ್ಯಾರ್ಥಿಗಳ ಕಲಿಕಾ ಹಂತದಲ್ಲಿ ಶಿಕ್ಷಕರ ಪಾತ್ರ ಮೌಲ್ಯಯುತವಾದದ್ದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ, ವಿವೇಕ್ ಆಳ್ವ ಹೇಳಿದರು.
ಆಳ್ವಾಸ್ ಪದವಿ ಕಾಲೇಜಿನ ಮಾನವಿಕ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಮಕ್ಕಳು ಓದಿ ಜಾಣರಾಗಲು, ಯಾವುದೇ ವಿಷಯದ ಜ್ಞಾನವನ್ನು ಧಾರೆಯೆರೆಯಲು ಗುರುಗಳು ತಮ್ಮ ಸರ್ವಸ್ವವನ್ನು ಮೀಸಲಿಡುತ್ತಾರೆ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ. ಹೀಗಾಗಿ ವಿದ್ಯಾರ್ಥಿಗಳು ಕಲಿಸಿದ ಗುರುಗಳನ್ನು ಮರೆಯಬಾರದು ಎಂದರು.
ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ಮಾನವಿಕ ವಿಭಾಗದ ಡೀನ್ ಸಂಧ್ಯಾ ಕೆ. ಎಸ್., ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಗ್ರೇಶಲ್ ಸ್ವಾಗತಿಸಿ, ವಿದ್ಯಾರ್ಥಿ ಪ್ರಜ್ವಲ್ ವಂದಿಸಿದರು. ವಿದ್ಯಾರ್ಥಿನಿ ಪ್ರಿಯಾಂಕಾ ಪೂಜಾರ್ ಕಾರ್ಯಕ್ರಮವನ್ನು ನಿರೂಪಿಸಿದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق