ಮಂಗಳೂರು: ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾ ಸಾಮಾಜಿಕ ಪ್ರಕೋಷ್ಟದ ವತಿಯಿಂದ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಅವರ ಜನ್ಮದಿನದ ಅಂಗವಾಗಿ ಬಡ ಕುಟುಂಬಗಳಿಗೆ ಉಚಿತ LED ಬಲ್ಬ್ ವಿತರಣಾ ಕಾರ್ಯಕ್ರಮ ನಡೆಯಿತು.
ದೇರೆಬೈಲ್ ಉತ್ತರ ವಾರ್ಡಿನಲ್ಲಿ ನಡೆದ ಕಾರ್ಯಕ್ರಮವನ್ನು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸುದರ್ಶನ ಮೂಡಬಿದಿರೆ ಉದ್ಘಾಟಿಸಿದರು. ಮೇಯರ್ ಪ್ರೇಮಾನಂದ ಶೆಟ್ಟಿ, ಸಾಮಾಜಿಕ ಜಾಲತಾಣ ಪ್ರಕೋಷ್ಟದ ಅಧ್ಯಕ್ಷರಾದ ಅಜಿತ್ ಕುಮಾರ್ ಉಳ್ಳಾಲ್, ಸ್ಥಳೀಯ ಕಾರ್ಪೊರೇಟರ್ ಗಳು, ಬಿಜೆಪಿ ಪದಾಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق