ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬೆಂಗಳೂರು ; ಐಷಾರಾಮಿ ಕಾರು ಅಪಘಾತ

ಬೆಂಗಳೂರು ; ಐಷಾರಾಮಿ ಕಾರು ಅಪಘಾತ

 


ಬೆಂಗಳೂರು: ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಬಿ.ಎಂ.ಫಾರೂಕ್ ಒಡೆತನದ ಐಷಾರಾಮಿ ಕಾರು ಅಪಘಾತವಾಗಿದೆ. ಬೆಂಗಳೂರಿನ ಯಲಹಂಕ ಫ್ಲೈಓವರ್‌ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಕಾರು ಅಪಘಾತ ಸಂಭವಿಸಿದೆ.


ಫಾರೂಖ್ ಒಡೆತನದ MH 02 FF 5555 ನಂ ಐಷಾರಾಮಿ ಫೆರಾರಿ ಪೋರ್ಟೋಫಿನೋ ಕಾರು ನಿಯಂತ್ರಣ ತಪ್ಪಿ ಮೊದಲಿಗೆ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ಬಳಿಕ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.


ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರು ಚಲಾಯಿಸುತ್ತಿದ್ದವರು ಯಾರು ಎಂಬ ಬಗ್ಗೆ ಇನ್ನೂ ಪೊಲೀಸರು ಮಾಹಿತಿ ತಿಳಿಸಲಿಲ್ಲ. 


ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಇನ್ನೂ ಈ ಕಾರನ್ನು ಫಾರೂಖ್ ಪುತ್ರಿ ಬಳಸುತ್ತಿದ್ದ ಬಗ್ಗೆ ಮಾಹಿತಿ ಸಿಕ್ಕಿದ್ದು, ಈ ಘಟನೆ ಬಳಿಕ ಪರಸ್ಪರ ರಾಜಿಯೊಂದಿಗೆ 2 ಕಾರಿನ ಚಾಲಕರು ಹಿಂತಿರುಗಿದ್ದಾರೆ. 

0 تعليقات

إرسال تعليق

Post a Comment (0)

أحدث أقدم