ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬಾರ್ಕೂರು: ರಾಷ್ಟ್ರೀಯ ಶಿಕ್ಷಣ ನೀತಿ 2020 ಮಾಹಿತಿ ಕಾರ್ಯಾಗಾರ

ಬಾರ್ಕೂರು: ರಾಷ್ಟ್ರೀಯ ಶಿಕ್ಷಣ ನೀತಿ 2020 ಮಾಹಿತಿ ಕಾರ್ಯಾಗಾರ


ಉಡುಪಿ: "ಬದಲಾಗುತ್ತಿರುವ ಜಾಗತಿಕ ಆಥಿ೯ಕ ಶೈಕ್ಷಣಿಕ ರಂಗದಲ್ಲಿ ನಮ್ಮ ವಿದ್ಯಾರ್ಥಿಗಳು ಸ್ಪಧಾ೯ತ್ಮಕವಾಗಿ ಎದುರಿಸಿ ನಿಲ್ಲಬೇಕಾದರೆ ಅದಕ್ಕೆ ಪೂರಕವಾದ ಶಿಕ್ಷಣ ನೀಡಬೇಕಾದ ಅನಿವಾರ್ಯತೆ ಇದೆ. ಈ ದಿಕ್ಕಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಹೆಚ್ಚು ಅರ್ಥಪೂರ್ಣವಾಗಿ ಸುದೃಢವಾಗಿ ಹೊರ ಹೊಮ್ಮಿದೆ. ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವದ ಬೆಳವಣಿಗೆ ಹೆಚ್ಚು ಒತ್ತು ನೀಡುವ ಶಿಕ್ಷಣ ನೀತಿ ಇದಾಗಿದ್ದು ವಿದ್ಯಾರ್ಥಿಸ್ನೇಹಿ ನೀತಿ ಅನ್ನಿಸಿಕೊಂಡಿದೆ. ಗಳಿಸುವ ಜ್ಞಾನಕ್ಕೂ ಬದುಕಿನ ಉದ್ಯೋಗಕ್ಕೂ ನೇರ ಸಂಬಂಧ ಕಲ್ಪಿಸಿರುವುದು ಈ ನೀತಿಯ ವಿಶೇಷತೆ. ಸರ್ಕಾರ ಈಗಾಗಲೇ ರಾಷ್ಟ್ರೀಯ ಉತ್ಪನ್ನದ ಶೇ.6ರಷ್ಟು ಹಣವನ್ನು ಶಿಕ್ಷಣಕ್ಕಾಗಿ ಮೀಸಲಿಡಲು ಮುಂದಾಗಿದ್ದು ಭಾರತದ ಶೈಕ್ಷಣಿಕ ಕ್ಷೇತ್ರದಲ್ಲಿಯೇ ಇದೊಂದು ಕ್ರಾಂತಿಕಾರಿ ನಿರ್ಧಾರವಾಗಿದೆ. ಇದನ್ನು ಯಶಸ್ವಿಗೊಳಿಸುವಲ್ಲಿ ಶಿಕ್ಷಣ ಇಲಾಖೆ ಶಿಕ್ಷಕರು ವಿದ್ಯಾರ್ಥಿಗಳು ಪೇೂಷಕರು ಹೆಚ್ಚು ಆಸಕ್ತಿ ವಹಿಸಿ ಪಾಲುಗೊಳ್ಳಬೇಕಾದ್ದು ಅನಿವಾರ್ಯ" ಎಂದು ಅಂಕಣಕಾರ ನಿವೃತ್ತ ರಾಜ್ಯ ಶಾಸ್ತ್ರ ಪ್ರಾಧ್ಯಾಪಕ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಅಭಿಪ್ರಾಯಿಸಿದರು.


ಅವರು ಬಾರಕೂರು ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಪದವಿ ಕಾಲೇಜಿನ ಆಂತರಿಕ ಗುಣಮಟ್ಟ ಕೇೂಶದ ಆಶ್ರಯದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ವಿಶೇಷ ಉಪನ್ಯಾಸ ನೀಡಿದರು.


ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಭಾರ ಪ್ರಾಂಶುಪಾಲ ಪ್ರೊ.ಶ್ರೀನಿವಾಸ ಶೆಟ್ಟಿ ವಹಿಸಿದ್ದರು. ಡಾ.ರಾಜಕುಮಾರ್ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೇೂಶದ ಸಂಯೇೂಜಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಮಾಜ ಶಾಸ್ತ್ರ ವಿಭಾಗದ ಮುಖಸ್ಥರಾದ ಚಿಕ್ಕ ಹನುಮಯ್ಯ ಸ್ವಾಗತಿಸಿದರು. ಶ್ರುತಿ ಆಚಾರ್ಯ ಸಹಾಯಕ ಪ್ರಾಧ್ಯಾಪಕಿ ವಾಣಿಜ್ಯ ಶಾಸ್ತ್ರ ವಂದಿಸಿದರು. ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ವೀರಣ್ಣ ಎಸ್ ಕಾಯ೯ಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳು, ಪೇೂಷಕರು, ಉಪನ್ಯಾಸಕರು ಮಾಹಿತಿ ಕಾರ್ಯಾಗಾರದಲ್ಲಿ ಭಾಗವಹಿಸಿದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم