ಕುಂದಾಪುರ: ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ನಾಥ ಪರಂಪರೆಯ ಪ್ರಾಚೀನ ಶ್ರೀ ಕಾಲಭೈರವ ದೇವಸ್ಥಾನದ ಸ್ವಚ್ಛತೆಗಾಗಿ 'ನಿರ್ಮಲ ದೇಗುಲ' ಶ್ರಮದಾನ ಕಾರ್ಯಕ್ರಮ ನಾಳೆ ನಡೆಯಲಿದೆ.
ಬಸ್ರೂರಿನ ಮೂಡ್ಕೇರಿಯಲ್ಲಿರುವ ಶ್ರೀ ಕಾಲಭೈರವ ದೇವಾಲಯದ ಆವರಣದಲ್ಲಿ ಈ ಶ್ರಮದಾನ ಕಾರ್ಯ ಭಾನುವಾರ ಬೆಳಗ್ಗೆ 9 ಗಂಟೆಗೆ ನಡೆಯಲಿದೆ.
ಸ್ವರಾಜ್ಯ 75 ಕಾರ್ಯಕ್ರಮ ಸಂಚಾಲಕ ಪ್ರದೀಪ್ ಕುಮಾರ್ ಬಸ್ರೂರು ಅವರ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ. ಎನ್‌ಎಸ್‌ಎಸ್ ಯೋಜನಾಧಿಕಾರಿ ಪ್ರವೀಣ್ ಮೊಗವೀರ ಗಂಗೊಳ್ಳಿ ಮತ್ತು ಸಹ ಯೋಜನಾಧಿಕಾರಿ ಶ್ರೀಮತಿ ರೇಷ್ಮಾ ಶೆಟ್ಟಿ ಅವರು ಮಾರ್ಗದರ್ಶನ ಮಾಡಲಿದ್ದಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق