ಉಳ್ಳಾಲ: ರಾಷ್ಟ್ರೀಯ ರಕ್ತದಾನಿಗಳ ದಿನದ ಅಂಗವಾಗಿ ಅಕ್ಟೋಬರ್ 1ರ ಶುಕ್ರವಾರದಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಉಳ್ಳಾಲ ಘಟಕದ ವತಿಯಿಂದ ಸಂತ ಸೆಬಾಸ್ಟಿಯನ್ ಆಂಗ್ಲ ಮಾಧ್ಯಮ ಶಾಲೆ (ಆಡಂ ಕುದ್ರು) ಇಲ್ಲಿ ಸರಕಾರಿ ವೆನ್‍ಲಾಕ್ ಆಸ್ಪತ್ರೆಯ ರಕ್ತ ನಿಧಿಯ ಸಹಕಾರದೊಂದಿಗೆ, ಲಯನ್ಸ್ ಕ್ಲಬ್ ಮಂಗಳೂರು, ಲಿಯೋ ಕ್ಲಬ್ ಮಂಗಳೂರು ಇವರ ಸಹಭಾಗತ್ವದಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ ರಕ್ತದಾನ ಶಿಬಿರ ಜರುಗಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆ ಇದರ ಸಂಯುಕ್ತ ಆಶ್ರಯದಲ್ಲಿ ಈ ಶಿಬಿರ ಜರುಗಲಿದ್ದು, ಆಸಕ್ತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಬಹುದಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment