ಬೆಂಗಳೂರು: ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ನಡೆದಿದೆ.
ಬೆಂಗಳೂರಿನ ಅತ್ತಿಬೆಲೆಯ ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ.
ಫ್ಯಾಕ್ಟರಿ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಕೆಮಿಕಲ್ ಘಾಟು ತುಂಬಿಕೊಂಡಿದ್ದು, ದಟ್ಟ ಹೊಗೆ ಆವರಿಸಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
Post a Comment