ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸಿಇಟಿ 2021 ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಸಿಇಟಿ 2021 ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಸಾವಿರದೊಳಗೆ ನಾಲ್ಕು ವಿದ್ಯಾರ್ಥಿಗಳಿಗೆ ರ‍್ಯಾಂಕ್ 


ಪುತ್ತೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ-2021 ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.


ಸಿಂಚನಾಲಕ್ಷ್ಮಿ ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 530 ನೇ ರ‍್ಯಾಂಕ್, ಇಂಜಿನಿಯರಿಂಗ್ ನಲ್ಲಿ 1582ನೇ ರ‍್ಯಾಂಕ್, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 974 ನೇ ರ‍್ಯಾಂಕ್, ವೆಟರ್ನರಿಯಲ್ಲಿ 974ನೇ ರ‍್ಯಾಂಕ್, ಫಾರ್ಮಾದಲ್ಲಿ 1266 ನೇ ರ‍್ಯಾಂಕ್ ಗಳಿಸಿದ್ದಾರೆ. ಈಕೆ ಬಂಗಾರಡ್ಕದ ಮುರಳೀಧರ ಭಟ್ ಮತ್ತು ಶೋಭಾ ಬಿ ದಂಪತಿಗಳ ಪುತ್ರಿ.


ಅಮೃತಾ ಭಟ್ ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 579 ನೇ ರ‍್ಯಾಂಕ್, ಇಂಜಿನಿಯರಿಂಗ್ ನಲ್ಲಿ 1153ನೇ ರ‍್ಯಾಂಕ್, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 2094 ನೇ ರ‍್ಯಾಂಕ್, ವೆಟರ್ನರಿಯಲ್ಲಿ 2094ನೇ ರ‍್ಯಾಂಕ್, ಫಾರ್ಮಾದಲ್ಲಿ 2476ನೇ ರ‍್ಯಾಂಕ್ ಗಳಿಸಿದ್ದಾರೆ. ಈಕೆ ಬಂಟ್ವಾಳ ತಾಲೂಕಿನ ಕುರ್ನಾಡಿನ ಪ್ರಸನ್ನ ಕುಮಾರ್ ಮತ್ತು ಅನುಪಮಾ ದಂಪತಿಗಳ ಪುತ್ರಿ.


ಗಣೇಶ ಕೃಷ್ಣ ಇಂಜಿನಿಯರಿಂಗ್ ವಿಭಾಗದಲ್ಲಿ 677ನೇ ರ‍್ಯಾಂಕ್, ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 1385 ನೇ ರ‍್ಯಾಂಕ್, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 6122 ನೇ ರ‍್ಯಾಂಕ್  ಮತ್ತು ಫಾರ್ಮಾದಲ್ಲಿ 2291 ನೇ ರ‍್ಯಾಂಕ್ ಗಳಿಸಿದ್ದಾರೆ. ಈತನು ಸುಳ್ಯದ ವೆಂಕಟರಮಣ ಭಟ್ ಮತ್ತು ವಾಣಿ ಭಟ್‌ರವರ ಪುತ್ರ. 


ಚಿನ್ಮಯಿ ಇಂಜಿನಿಯರಿಂಗ್ ವಿಭಾಗದಲ್ಲಿ 784ನೇ ರ‍್ಯಾಂಕ್, ಫಾರ್ಮಾದಲ್ಲಿ 2664 ನೇ ರ‍್ಯಾಂಕ್ ಗಳಿಸಿದ್ದಾರೆ. ಈಕೆ ವಿಟ್ಲದ ರಾಜ್ ನಾರಾಯಣ ಮತ್ತು ಗೀತಾ ದಂಪತಿಗಳ ಪುತ್ರಿ.


ಅವನೀಶ ಕೆ ಇಂಜಿನಿಯರಿಂಗ್ ವಿಭಾಗದಲ್ಲಿ 1383ನೇ ರ‍್ಯಾಂಕ್, ಫಾರ್ಮಾದಲ್ಲಿ 5067ನೇ ರ‍್ಯಾಂಕ್ ಗಳಿಸಿದ್ದಾರೆ. ಈತನು ಕಬಕದ ಗೋಪಾಲಕೃಷ್ಣ ಭಟ್ ಮತ್ತು ಶೈಲಜಾ ದಂಪತಿಗಳ ಪುತ್ರ.


ಅಭಿರಾಮ್ ಯು ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 1575 ನೇ ರ‍್ಯಾಂಕ್, ಇಂಜಿನಿಯರಿಂಗ್ ನಲ್ಲಿ 2592ನೇ ರ‍್ಯಾಂಕ್, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 4319 ನೇ ರ‍್ಯಾಂಕ್, ವೆಟರ್ನರಿಯಲ್ಲಿ 4318ನೇ ರ‍್ಯಾಂಕ್, ಫಾರ್ಮಾದಲ್ಲಿ 5131 ನೇ ರ‍್ಯಾಂಕ್ ಗಳಿಸಿದ್ದಾರೆ. ಈತನು ಕೆಮ್ಮಾಯಿಯ ನಾರಾಯಣ ಬೈಪಾಡಿತ್ತಾಯರವರ ಸುಪುತ್ರ.


ಮನೋಜ್ ಎಸ್ ಆರ್ ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 4390 ನೇ ರ‍್ಯಾಂಕ್, ಇಂಜಿನಿಯರಿಂಗ್ ವಿಭಾಗದಲ್ಲಿ 5926ನೇ ರ‍್ಯಾಂಕ್ ಗಳಿಸಿದ್ದಾರೆ. ಈತನು ಹೊಳೆನರಸೀಪುರದ ರಾಜಶೇಖರ ಮತ್ತು ಸಂಧ್ಯಾರಾಣಿ ದಂಪತಿ ಪುತ್ರ.


ರವಿನಾರಾಯಣ ಎಸ್ ಇಂಜಿನಿಯರಿಂಗ್ ವಿಭಾಗದಲ್ಲಿ 5945ನೇ ರ‍್ಯಾಂಕ್ ಗಳಿಸಿದ್ದಾರೆ. ಈತನು ಕನ್ಯಾನದ ಶಶಿಧರ ಕುಮಾರ್ ಮತ್ತು ಅರುಣಾ ದಂಪತಿಗಳ ಪುತ್ರ.


ಪ್ರೀತಂ ಜಿ ಇಂಜಿನಿಯರಿಂಗ್ ವಿಭಾಗದಲ್ಲಿ 5972ನೇ ರ‍್ಯಾಂಕ್ ಗಳಿಸಿದ್ದಾರೆ. ಈತನು ಆರ್ಯಾಪು ಗ್ರಾಮದ ರಾಮ ನಾಯ್ಕ ಮತ್ತು ಗೀತಾ ದಂಪತಿಗಳ ಪುತ್ರ.


ಶಶಾಂಕ್ ಬಿ ಇಂಜಿನಿಯರಿಂಗ್ ವಿಭಾಗದಲ್ಲಿ 6310ನೇ ರ‍್ಯಾಂಕ್ ಗಳಿಸಿದ್ದಾರೆ. ಈತನು ಬಡೆಕ್ಕಿಲದ ಸೀತರಾಮ ಭಟ್ ಮತ್ತು ಗಾಯತ್ರಿ ದಂಪತಿಗಳ ಪುತ್ರ.


ಅಭಿಜ್ಞಾಲಕ್ಷ್ಮಿ ಪಿ ಇಂಜಿನಿಯರಿಂಗ್ ವಿಭಾಗದಲ್ಲಿ 6310ನೇ ರ‍್ಯಾಂಕ್, ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 6025 ನೇ ರ‍್ಯಾಂಕ್ ಗಳಿಸಿದ್ದಾರೆ. ಈಕೆ ಮೀಯಪದವಿನ ಶಿವಕುಮಾರ ಪಿ ಮತ್ತು ವಾಣಿಶ್ರೀ ದಂಪತಿಗಳ ಪುತ್ರಿ.


ನವ್ಯಶ್ರೀ ಇಂಜಿನಿಯರಿಂಗ್ ವಿಭಾಗದಲ್ಲಿ 7405ನೇ ರ‍್ಯಾಂಕ್, ರಕ್ಷಿತಾ ಸಿ.ಪಿ ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 7978 ನೇ ರ‍್ಯಾಂಕ್, ಶರಣ್ ಎಸ್. ಶೆಟ್ಟಿ ಇಂಜಿನಿಯರಿಂಗ್ ವಿಭಾಗದಲ್ಲಿ 9346ನೇ ರ‍್ಯಾಂಕ್, ಶ್ರೇಯಾ ವಿ ಎನ್ ಇಂಜಿನಿಯರಿಂಗ್ ವಿಭಾಗದಲ್ಲಿ 9785ನೇ ರ‍್ಯಾಂಕ್ ಗಳಿಸಿರುತ್ತಾರೆ.  


ಅತ್ಯುನ್ನತ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿಯನ್ನು ತಂದ ಎಲ್ಲಾ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ. 



(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ





0 تعليقات

إرسال تعليق

Post a Comment (0)

أحدث أقدم