ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕ್ಯಾಂಟರ್ ವಾಹನ ಪಲ್ಟಿ ; ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಕ್ಯಾಂಟರ್ ವಾಹನ ಪಲ್ಟಿ ; ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

 


ಧಾರವಾಡ: ಕ್ಯಾಂಟರ್ ವಾಹನ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆಯೊಂದು ಜಿಲ್ಲೆಯ ಕ್ಯಾರಕೊಪ್ಪ ಗ್ರಾಮದಲ್ಲಿ ನಡೆದಿದೆ. ಅಪಘಾತ ದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.


 ನಿನ್ನೆ ಮಧ್ಯರಾತ್ರಿ ಕ್ಯಾರಕೊಪ್ಪ ಗ್ರಾಮದ ಎನ್‌ಎಚ್ 4 ಬಳಿ ಸಂಭವಿಸಿದೆ.


ಕ್ಯಾಂಟರ್ ಚಾಲಕ ನಿದ್ರೆ ಮಂಪರಿನಲ್ಲಿ ಇದ್ದು, ಈ ದುರಂತ ನಡೆದಿರಬಹುದು ಎಂದು ಹೇಳಲಾಗಿದೆ. ಮೃತರ ಬಗ್ಗೆ ಇನ್ನೂ ಯಾವುದೇ ಮಾಹಿತಿ ತಿಳಿದು ಬಂದಿಲ್ಲ.


 ಘಟನೆಯಲ್ಲಿ ಗಾಯಗೊಂಡಿರುವ ಇಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. 


ಧಾರವಾಡ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

0 Comments

Post a Comment

Post a Comment (0)

Previous Post Next Post