ಪುಂಜಾಲಕಟ್ಟೆ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕಾಲೇಜು ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಪ್ರಾರ್ಥಮಿಕ ಆರೋಗ್ಯ ಕೇಂದ್ರ ಪುಂಜಾಲಕಟ್ಟೆ ಇವರ ಸಹಯೋಗದೊಂದಿಗೆ ಕಾಲೇಜಿನಲ್ಲಿ ದಿನಾಂಕ 21 ಸಪ್ಟೆಂಬರ್ 2021 ರಂದು ಲಸಿಕಾ ಅಭಿಯಾನ ಯಶಸ್ವಿಯಾಗಿ ಜರುಗಿತು.
ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಪ್ರೊ. ಕೆ.ಗಣಪತಿ ಭಟ್ ಇವರು ಲಸಿಕಾ ಅಭಿಯಾನವನ್ನು ಉದ್ಘಾಟಿಸಿದರು. ಪ್ರಾರ್ಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ಶ್ರೀಮತಿ ಬೇಷ ಕುಮಾರಿ, ಕಮಲ, ರಂಜಿತಾ ಮತ್ತು ಗಿರೀಶ್ ಹಾಗೂ ಆಶಾ ಕಾರ್ಯಕರ್ತೆಯರಾದ ಅಕ್ಷಣಿ ಮತ್ತು ಲತಾ ಪಾಟೀಲ್ ಉಪಸ್ಥಿತರಿದ್ದರು.
ಐಕ್ಯೂಎಸಿ ಸಂಚಾಲಕರಾದ ಪ್ರೊ. ರವಿಶಂಕರ ಬಿ, ರೆಡ್ ಕ್ರಾಸ್ ಘಟಕದ ಸಂಚಾಲಕರಾದ ಪ್ರೊ. ಗೀತಾ ಎಸ್ ವಿದ್ಯಾರ್ಥಿ ಪ್ರತಿಭಾ ವೇದಿಕೆಯ ಸಂಚಾಲಕರಾದ ಡಾ. ವಿಶಾಲ್ ಪಿಂಟೋ, ರೋವರ್ಸ್ ಮತ್ತು ರೇಂಜರ್ಸ್ ನಾಯಕರಾದ ಪ್ರೊ. ಪ್ರೀತಿ ಕೆ ರಾವ್ ಮತ್ತು ಪ್ರೊ. ಆಂಜನೇಯ ಎಂ ಎನ್ ಹಾಗೂ ಬೋಧಕ ಬೋಧಕೇತರ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಆರೋಗ್ಯ ಇಲಾಖೆಯ ಸಿಬ್ಬಂದಿವರ್ಗದವರಿಗೆ ಕಾಲೇಜಿನ ಪರವಾಗಿ ಅಭಿನಂದನೆಯನ್ನು ಸಲ್ಲಿಸಲಾಯಿತು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ, ರೇಂಜರ್ಸ್ ಮತ್ತು ರೋವರ್ಸ್ ಘಟಕ, ಹಾಗೂ ಭಾರತೀಯ ಯುವ ರೆಡ್ ಕ್ರಾಸ್ ಘಟಕಗಳ ಸ್ವಯಂಸೇವಕರು ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಿದರು. ಸುಮಾರು 280 ಫಲಾನುಭವಿಗಳು ಲಸಿಕಾ ಅಭಿಯಾನ ಕಾರ್ಯಕ್ರಮದ ಪ್ರಯೋಜನ ಪಡೆದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment