ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಆಟವಾಡುತ್ತಾ 5 ರೂ ನಾಣ್ಯ ನುಂಗಿದ 4 ವರ್ಷದ ಬಾಲಕಿ ಸಾವು

ಆಟವಾಡುತ್ತಾ 5 ರೂ ನಾಣ್ಯ ನುಂಗಿದ 4 ವರ್ಷದ ಬಾಲಕಿ ಸಾವು



 ಮೈಸೂರು: ಐದು ರೂಪಾಯಿ ನಾಣ್ಯ ನುಂಗಿದ್ದ 4 ವರ್ಷದ ಬಾಲಕಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಆಯರಹಳ್ಳಿ ಗ್ರಾಮದಲ್ಲಿ ನಡೆದಿದೆ.


ಹಿರಿಕ್ಯಾತನಹಳ್ಳಿಯ ಅಜ್ಜಿ ಮನೆಯಲ್ಲಿದ್ದ ಖುಷಿ ಶುಕ್ರವಾರ ನಾಣ್ಯದೊಂದಿಗೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನಾಣ್ಯವನ್ನು ನುಂಗಿದ್ದಳು.


 ಘಟನೆ ನಡೆದ ತಕ್ಷಣವೇ ಪೋಷಕರು ಬಾಲಕಿಗೆ ಮೊದಲು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು. 


ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. 


ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬಾಲಕಿ ಮೃತಪಟ್ಟಿರುವುದು ವರದಿಯಾಗಿದೆ.

0 تعليقات

إرسال تعليق

Post a Comment (0)

أحدث أقدم