ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಾಷ್ಟ್ರೀಯ ಸಂತ ಕವಿ ಕನಕ ಸಂಶೋಧನ ಕೇಂದ್ರಕ್ಕೆ ಧನಂಜಯ ಕುಂಬ್ಳೆ ಸಹಿತ ಐವರ ನೇಮಕ

ರಾಷ್ಟ್ರೀಯ ಸಂತ ಕವಿ ಕನಕ ಸಂಶೋಧನ ಕೇಂದ್ರಕ್ಕೆ ಧನಂಜಯ ಕುಂಬ್ಳೆ ಸಹಿತ ಐವರ ನೇಮಕ

 



ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ. ಧನಂಜಯ ಕುಂಬ್ಳೆ ಸೇರಿದಂತೆ ಐದು ಮಂದಿಯನ್ನು ಕರ್ನಾಟಕ ಸರಕಾರದ ರಾಷ್ಟ್ರೀಯ ಸಂತಕವಿ ಕನಕದಾಸರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ  ಕಾರ್ಯಾನುಷ್ಠಾನ ಮಂಡಳಿಗೆ  ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ಈ ಕುರಿತು ಆದೇಶ ಹೊರಡಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ  ಕೆ. ವೆಂಕಟೇಶಪ್ಪ, ರಾಷ್ಟ್ರೀಯ ಸಂತಕವಿ ಕನಕದಾಸರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ದೈನಂದಿನ ಕಾರ್ಯಚಟುವಟಿಕೆಗಳ  ಹಾಗೂ ಕಾರ್ಯಕ್ರಮಗಳ ಅನುಷ್ಟಾನಗಳ ದೃಷ್ಠಿಯಿಂದ ಕಾರ್ಯಾನುಷ್ಠಾನ ಮಂಡಳಿಗೆ ಅಧಿಕಾರೇತರ ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಿಸಿ ಸಮಿತಿಯನ್ನ ಪುನರ್ ರಚಿಸಿ ಆದೇಶ ಹೊರಡಿಸಿದ್ದಾರೆ.


ಇತರೆ ರಾಯಚೂರಿನ ಡಾ. ಜಯಲಕ್ಷ್ಮಿ ಮಂಗಳಮೂರ್ತಿ, ಮೈಸೂರಿನ ಅ.ಮ. ಭಾಸ್ಕರ್, ಮೈಸೂರಿನ ಜ್ಯೋತಿ ಶಂಕರ್, ಬೆಂಗಳೂರಿನ ಡಾ. ಎನ್.ಆರ್ ಲಲಿತಾಂಬ, ಶಿವಮೊಗ್ಗದ ಡಾ. ಶುಭ ಮರವಂತೆ ಅವರನ್ನ ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಿಸಲಾಗಿದೆ.


ಧನಂಜಯ ಕುಂಬ್ಳೆ ಇವರು ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಸಂಶೋಧನ ಕೇಂದ್ರದ ಸಂಯೋಜಕರಾಗಿ, ಪ್ರಸಾರಾಂಗದ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post