ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಿಟ್ಟೆಯಲ್ಲಿ ಇಂಜಿನಿಯರ್ಸ್ ದಿನಾಚರಣೆ

ನಿಟ್ಟೆಯಲ್ಲಿ ಇಂಜಿನಿಯರ್ಸ್ ದಿನಾಚರಣೆ



ನಿಟ್ಟೆ: ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಇಂಜಿನಿಯರಿಂಗ್ ವಿಭಾಗವು ಸೆ.15 ರಂದು ಇಂಜಿನಿಯರ್ಸ್ ದಿನವನ್ನು ಸರ್. ಎಂ. ವಿಶ್ವೇಶ್ವರಯ್ಯ ಬ್ಲಾಕ್ ನಲ್ಲಿ ಆಚರಿಸಿತು.


ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಚಾರ್ಯ ಡಾ.ನಿರಂಜನ್ ಎನ್ ಚಿಪ್ಲಂಕರ್ ಸರ್. ಎಂ. ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.


'ವಿಶ್ವೇಶ್ವರಯ್ಯನವರ ಆದರ್ಶ ಗುಣಗಳು ವಿದ್ಯಾರ್ಥಿಗಳನ್ನು ಹಾಗೂ ಪ್ರಾಧ್ಯಾಪಕರನ್ನು ಹುರಿದುಂಬಿಸುವಂತೆ ಮಾಡಲಿ' ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲ ಡಾ. ರಮೇಶ್ ಮಿತ್ತಂತಾಯ ಈ ದಿನದ ಪ್ರಾಮುಖ್ಯತೆಯನ್ನು ತಿಳಿಸಿದರು.


ವಿಭಾಗದ ಸಹಪ್ರಾಧ್ಯಾಪಕ ಡಾ. ಶ್ರೀರಾಮ್ ಮರಾಠೆ ಸರ್. ಎಂ. ವಿಶ್ವೇಶ್ವರಯ್ಯ ಅವರ ಜೀವನದ ಕೆಲವು ಮಹತ್ವದ ಘಟನೆಗಳನ್ನು ತಿಳಿಸಿ ಅವು ನಮ್ಮ ಜೀವನಕ್ಕೆ ಹೇಗೆ ಆದರ್ಶಪ್ರಾಯವಾಗಲಿದೆ ಎಂದು ತಿಳಿಸಿದರು.


ನಿಟ್ಟೆ ಕ್ಯಾಂಪಸ್ ರೆಜಿಸ್ಟ್ರಾರ್ ಯೋಗೀಶ್ ಹೆಗ್ಡೆ, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು ಉಪಸ್ಥಿತರಿದ್ದರು. ಸಿವಿಲ್ ವಿಭಾಗದ ಮುಖ್ಯಸ್ಥ ಡಾ.ಅರುಣ್ ಕುಮಾರ್ ಭಟ್ ಸ್ವಾಗತಿಸಿದರು, ಸಹಪ್ರಾಧ್ಯಾಪಾಕ ಸಬ್ಯತ್ ಶೆಟ್ಟಿ ವಂದಿಸಿದರು. ವಿದ್ಯಾರ್ಥಿನಿ ಧೃತಿ ಮುಂಡೋಡಿ ಕಾರ್ಯಕ್ರಮ ನಿರೂಪಿಸಿದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post