ವಿವೇಕಾನಂದ ಕಾಲೇಜಿನಲ್ಲಿ ಒಂದು ದಿನದ ಶೈಕ್ಷಣಿಕ ಅಭಿವೃದ್ಧಿ ಕಾರ್ಯಕ್ರಮ
ಪುತ್ತೂರು: ಸ್ನಾತಕೋತ್ತರ ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಶೈಕ್ಷಣಿಕ ಬೆಳವಣಿಗೆಗೆ ಸಂಶೋಧನಾ ಲೇಖನಗಳ ತಯಾರಿ ಹಾಗೂ ಓದುವಿಕೆ ಬಹಳ ಮುಖ್ಯ. ಸಂಶೋಧನೆಯು ನಮ್ಮ ವ್ಯಾಪ್ತಿಯ ಹೊರಗಿನ ವಿಷಯಗಳ ಕುರಿತಾಗಿ ಆಸಕ್ತಿಯನ್ನು ಹೆಚ್ಚಿಸುತ್ತದೆ. ಈ ಆಧುನಿಕ ಯುಗದಲ್ಲಿ ಸಂಶೋಧನಾ ಲೇಖನಗಳಿಗೆ ಪೂರಕವಾದಂತಹ ತಂತ್ರಜ್ಞಾನಗಳು ಇರುವುದಿಂದ, ಸಂಶೋಧನ ಲೇಖನಗಳನ್ನು ತಯಾರಿ ಮಾಡಲು ಹಾಗೂ ಸಂಶೋಧನಾ ಲೇಖನಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲು ಬಹಳ ಸಹಾಯವಾಗುತ್ತಿದೆ ಎಂದು ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಲೋಕೇಶ್ ಅವರು ಹೇಳಿದರು.
ಅವರು ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವ್ಯವಹಾರ ಆಡಳಿತ ವಿಭಾಗ, ವಿವೇಕಾನಂದ ಸಂಶೋಧನಾ ಕೇಂದ್ರ, ಐಕ್ಯೂಎಸಿ ಘಟಕ, ವಾಣಿಜ್ಯಶಾಸ್ತ್ರ ಮತ್ತು ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗಗಳ ಆಶ್ರಯದಲ್ಲಿ ಆಯೋಜಿಸಲಾದ ಒಂದು ದಿನದ Faculty development programme ನಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ 'An overview of Construction of Research Article' ಎಂಬ ವಿಷಯದ ಕುರಿತಾಗಿ ಸೋಮವಾರ ಮಾತನಾಡಿದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣವನ್ನು ನೀಡಿದ ಕಾಲೇಜಿನ ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಡಾ. ಶ್ರೀಶ ಭಟ್, ಸರ್ಚ್ ಪೇಪರ್ ತಯಾರಿಯ ಮೊದಲು ನಾವು ಆಯ್ಕೆ ಮಾಡುವ ವಿಷಯದ ಬಗ್ಗೆ ಸಾಧ್ಯವಾದಷ್ಟು ಮಾಹಿತಿ ಪಡೆದುಕೊಳ್ಳಬೇಕು. ಸೂಕ್ತ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಲು ಉಪಯೋಗವಾಗುವಂತಹ ಆ್ಯಪ್ಗಳ ಬಗ್ಗೆ ಮಾಹಿತಿ ನೀಡಿ, ರಿಸರ್ಚ್ ಪೇಪರ್‌ಗಳನ್ನು ಓದುವ ವಿಧಾನ ಬೇರೆಯೇ ಇದೆ. ಈ ವಿಧಾನಗಳನ್ನು ವಿದ್ಯಾರ್ಥಿಗಳು ಕಲಿತುಕೊಳ್ಳುವುದು ಅಗತ್ಯ ಎಂದು ನುಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ ವಿಷ್ಣು ಗಣಪತಿ ಭಟ್ ಮಾತನಾಡಿ, ವಿದ್ಯಾರ್ಥಿಗಳು ತಮಗೆ ಸಿಗುವ ಅವಕಾಶಗಳನ್ನು ಬಳಸಿಕೊಳ್ಳಬೇಕು. ಬರೆಯುವ ಕೌಶಲವನ್ನು ಬೆಳೆಸಿಕೊಳ್ಳಬೇಕು. ನಾವು ಮಾಡಿದ ತಪ್ಪನ್ನು ನಾವೇ ತಿದ್ದುಪಡಿ ಮಾಡಿಕೊಳ್ಳಲು ಹಲವು ಸಾಫ್ಟ್‌ವೇರ್ ಗಳಿವೆ. ಅದರ ಬಳಕೆಯನ್ನು ತಿಳಿದುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಐಕ್ಯೂಎಸಿ ಘಟಕದ ಸಂಯೋಜಕ ಪ್ರೊ. ಶಿವಪ್ರಸಾದ್ ಕೆ ಎಸ್, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ರವಿಕಲಾ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಂಯೋಜಕಿ ಡಾ ವಿಜಯ ಸರಸ್ವತಿ ಉಪಸ್ಥಿತರಿದ್ದರು. ಪದವಿ ಹಾಗೂ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗಗಳ ಉಪನ್ಯಾಸಕರು, ಎಂ.ಕಾಂ. ವಿದ್ಯಾರ್ಥಿಗಳು. ವಿದ್ಯಾ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ರೇಖಾ ಪಿ ಸ್ವಾಗತಿಸಿ, ಉಪನ್ಯಾಸಕಿ ಅನ್ನಪೂರ್ಣ ಪಿ ಜಿ ವಂದಿಸಿದರು. ಉಪನ್ಯಾಸಕ ಗೌತಮ್ ಪೈ ಕಾರ್ಯಕ್ರಮ ನಿರೂಪಿಸಿದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment