ಹಾಸನ: ಕೋವಿಡ್ ರೋಗಿಗಳ ಐಸೊಲೇಷನ್ ಗೆ ವಿಶೇಷವಾಗಿ ತಯಾರುಗೊಳಿಸಲಾದ ರೈಲು ಬೋಗಿಗಳಿಗೆ ಅರಸೀಕೆರೆ ಜಂಕ್ಷನ್ ನಲ್ಲಿ ಬೆಂಕಿ ಹೊತ್ತಿಕೊಂಡಿದೆ.
ಮಂಗಳವಾರ ರಾತ್ರಿ ಈ ಬಗ್ಗೆ ವರದಿಯಾಗಿದ್ದು, ಸರಿಯಾದ ಸಮಯಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಹೆಚ್ಚಿನ ಅವಘಡ ಸಂಭವಿಸುವುದಕ್ಕೂ ಮುನ್ನ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.
ರೈಲ್ವೆ ಪೊಲೀಸರ ಮಾಹಿತಿಯ ಪ್ರಕಾರ ಬೆಂಕಿ ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.
ಅರಸಿಕೆರೆ ಜಂಕ್ಷನ್ ನಲ್ಲಿ ಐಸೊಲೇಷನ್ ಗೆ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದ್ದ ರೈಲು ಬೋಗಿಗಳನ್ನು ಕೆಲವು ದಿನಗಳಿಂದ ನಿಲ್ಲಿಸಲಾಗಿತ್ತು.
ಒಂದು ಮೂಲದ ಪ್ರಕಾರ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ.
Post a Comment