ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ನಿಧನ

ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ನಿಧನ

 


ಮಂಗಳೂರು: ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅವರು ಇಂದು (ಸೆ.13) ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.


 ಅವರಿಗೆ 80 ವರ್ಷ ವಯಸ್ಸಾಗಿದ್ದು, ಕಳೆದ ಭಾನುವಾರ ಮನೆಯಲ್ಲಿ ಜಾರಿ ಬಿದ್ದು ಗಾಯಗೊಂಡಿದ್ದರು. 


ಇದರಿಂದಾಗಿ ಆಸ್ಕರ್​ ಫರ್ನಾಂಡಿಸ್​ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 


 ಮಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು.


 ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

0 Comments

Post a Comment

Post a Comment (0)

Previous Post Next Post