ಮಂಗಳೂರು: ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅವರು ಇಂದು (ಸೆ.13) ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ 80 ವರ್ಷ ವಯಸ್ಸಾಗಿದ್ದು, ಕಳೆದ ಭಾನುವಾರ ಮನೆಯಲ್ಲಿ ಜಾರಿ ಬಿದ್ದು ಗಾಯಗೊಂಡಿದ್ದರು.
ಇದರಿಂದಾಗಿ ಆಸ್ಕರ್ ಫರ್ನಾಂಡಿಸ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಮಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು.
ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.
إرسال تعليق