ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಶೈಕ್ಷಣಿಕ ಬೆಳವಣಿಗೆ- ಕೌಶಲ್ಯಾಭಿವೃದ್ಧಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ- ಐಎಸ್‌ಟಿಡಿ MOU

ಶೈಕ್ಷಣಿಕ ಬೆಳವಣಿಗೆ- ಕೌಶಲ್ಯಾಭಿವೃದ್ಧಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ- ಐಎಸ್‌ಟಿಡಿ MOU



ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಹಾಗೂ ಇಂಡಿಯನ್ ಸೊಸೈಟಿ ಫಾರ್ ಟ್ರೈನಿಂಗ್ & ಡೆವಲಪ್ಮೆಂಟ್ (ISTD) ಇದರ ಸಹಯೋಗದಲ್ಲಿ MOU ಕಾರ್ಯಕ್ರಮವು ಇಂದು (ಸೆ.21) ಸರಕಾರಿ ಪ್ರಥಮದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿ ನಡೆಯಿತು.


ಎರಡು ಸಂಸ್ಥೆಗಳ ನಡುವಿನ MOU, ಪುಂಜಾಲಕಟ್ಟೆ ಕಾಲೇಜಿನ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಬೆಳವಣಿಗೆ ತರಬೇತಿ ಮತ್ತು ಕೌಶಲ್ಯಾಭಿವೃದ್ಧಿಗೆ ಅನುವು ಮಾಡಿಕೊಡುತ್ತದೆ. ISTD ಯ ತಜ್ಞ ತರಬೇತುದಾರರು ಪುಂಜಾಲಕಟ್ಟೆ ಕಾಲೇಜಿನ ವಿದ್ಯಾರ್ಥಿಗಳಿಗೆ ಮೃದು ಕೌಶಲಗಳು, ವ್ಯಕ್ತಿತ್ವ ವಿಕಸನದ ಕ್ಷೇತ್ರದಲ್ಲಿನ ಅಭಿವೃದ್ಧಿಯ ಬಗ್ಗೆ ತರಬೇತಿ ನೀಡಿದರು.


ಈ ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕ ವರ್ಗ ಉಪಸ್ಥಿತರಿದ್ದರು. ಅತಿಥಿಗಳಾಗಿ ISTD ಯ ಉಪಾಧ್ಯಕ್ಷರಾದ ಪ್ರೊ. ಮಾಲಿನಿ ಹೆಬ್ಬಾರ್ ಹಾಗೂ ಸೈಂಟ್ ಆಗ್ನೆಸ್ ಕಾಲೇಜಿನ ಪ್ರಾಧ್ಯಪಕರಾದ ಪ್ರೊ. ದೇವಿಪ್ರಭಾ ಆಳ್ವ ಇವರು ಕಾರ್ಯಮದಲ್ಲಿ ಭಾಗವಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗಣಪತಿ ಭಟ್ ಕುಳಮರ್ವ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವು ನಡೆಯಿತು.


ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಲೋಕೇಶ್ ಇವರು ಸ್ವಾಗತಿಸಿ, ನಿರ್ವಹಣಾಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಪ್ರೀತಿ ಕೆ. ರಾವ್ ಇವರು ವಂದಿಸಿ ಕಾರ್ಯಕ್ರಮ ನಿರ್ವಹಿಸಿದರು.

(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



0 Comments

Post a Comment

Post a Comment (0)

Previous Post Next Post