ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕೋರ್ಟ್ ಆವರಣದಲ್ಲಿ ಗ್ಯಾಂಗ್ ವಾರ್; ನಾಲ್ವರು ಸಾವು, ಆರು ಜನರಿಗೆ ಗಾಯ

ಕೋರ್ಟ್ ಆವರಣದಲ್ಲಿ ಗ್ಯಾಂಗ್ ವಾರ್; ನಾಲ್ವರು ಸಾವು, ಆರು ಜನರಿಗೆ ಗಾಯ

 


ನವದೆಹಲಿ: ದೆಹಲಿಯ ಕೋರ್ಟ್ ಆವರಣದಲ್ಲಿ ಗ್ಯಾಂಗ್ ವಾರ್ ನಡೆದಿದ್ದು, ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಫೈರಿಂಗ್ ನಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ.


ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿದ್ದು, ಗ್ಯಾಂಗ್ ಸ್ಟರ್ ಜಿತೇಂದ್ರ ಯೋಗಿ ಎಂಬಾತನನ್ನು ಇಂದು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದರು


ರೂಂ ನಂಬರ್ 207ರಲ್ಲಿ ನ್ಯಾಯಾಧೀಶರ ಮುಂದೆ ವಿಚಾರಣೆ ನಡೆಯುತ್ತಿತ್ತು. ಈ ವೇಳೆ ವಕೀಲರ ವೇಷದಲ್ಲಿ ಬಂದ ಹಂತಕರು ಜಿತೇಂದ್ರ ಯೋಗಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.


ಈ ವೇಳೆ ಪೊಲೀಸರು ಇಬ್ಬರು ಹಂತಕರ ಮೇಲೆ ಫೈರಿಂಗ್ ಮಾಡಿ ಇಬ್ಬರನ್ನು ಹೊಡೆದುರುಳಿಸಿದ್ದಾರೆ. 


ಕೋರ್ಟ್ ಆವರಣದಲ್ಲಿಯೇ ನಡೆದ ಈ ಗುಂಡಿನ ದಾಳಿಯಲ್ಲಿ ಗ್ಯಾಂಗ್ ಸ್ಟರ್ ಜಿತೇಂದ್ರ ಯೋಗಿ ಸೇರಿ ನಾಲ್ವರು ಸಾವನ್ನಪ್ಪಿದ್ದು, 6 ಜನ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

0 Comments

Post a Comment

Post a Comment (0)

Previous Post Next Post