ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 2021ನೇ ಸಾಲಿನ ಕಾರಂತ ಹುಟ್ಟೂರ ಪ್ರಶಸ್ತಿಗೆ ಸೇತುವೆಗಳ ಸರದಾರ ಪದ್ಮಶ್ರೀ ಗಿರೀಶ್ ಭಾರದ್ವಾಜ್ ಆಯ್ಕೆ

2021ನೇ ಸಾಲಿನ ಕಾರಂತ ಹುಟ್ಟೂರ ಪ್ರಶಸ್ತಿಗೆ ಸೇತುವೆಗಳ ಸರದಾರ ಪದ್ಮಶ್ರೀ ಗಿರೀಶ್ ಭಾರದ್ವಾಜ್ ಆಯ್ಕೆ



ಸುಳ್ಯ: ಸುಳ್ಯದ ತೂಗುಸೇತುವೆಗಳ ಸರದಾರ ಎಂದೇ ಖ್ಯಾತರಾದ ಪದ್ಮಶ್ರೀ ಗಿರೀಶ್ ಭಾರದ್ವಾಜ್ ಅವರು ಉಡುಪಿಯ ಕೋಟತಟ್ಟು ಗ್ರಾಮ ಪಂಚಾಯಿತಿ ಮತ್ತು ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನವು 2021ನೇ ಸಾಲಿಗೆ ನೀಡುವ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.


ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯ ಯು.ಎಸ್ ಶೆಣೈ ಅವರು, ಡಾ. ಕಾರಂತರ ಆಸಕ್ತಿಯ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಕಳೆದ 16 ವರ್ಷಗಳಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.


ವಿವಿಧ ಕ್ಷೇತ್ರಗಳ ಸಾಧಕರಾದ ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿ, ಸುಪ್ರೀಂ ಕೋರ್ಟಿನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಂ.ಎನ್ ವೆಂಕಟಾಚಲಯ್ಯ, ಕೆ. ರಾಮಕೃಷ್ಣ ಹಂದೆ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ. ಬಿ. ಜಯಶ್ರೀ, ಡಾ. ಎಂ ಮೋಹನ ಆಳ್ವ, ಸಾಲುಮರದ ತಿಮ್ಮಕ್ಕ, ಚಿಟ್ಟಾಣಿ ರಾಮಚಂದ್ರ ಹೆಗಡೆ, ಜಯಂತ ಕಾಯ್ಕಿಣಿಮ ಸದಾನಂದ ಸುವರ್ಣ, ಡಾ. ಬಿ.ಎಂ ಹೆಗ್ಡೆ, ಪ್ರಕಾಶ್ ರೈ, ಹೆಸರಾಂತ ಪತ್ರಕರ್ತ ಶ್ರೀಪಡ್ರೆ,, ಕವಿತಾ ಮಿಶ್ರಾ, ಡಾ. ಎಸ್‌.ಎಲ್ ಭೈರಪ್ಪ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.


ಶಿವರಾಮ ಕಾರಂತರ ಜನ್ಮದಿನವಾದ ಅಕ್ಟೋಬರ್ 10ರಂದು ಕೋಟದ ಶಿವರಾಮ ಕಾರಂತ ಥೀಮ್ ಪಾರ್ಕಿನಲ್ಲಿ ಅಪರಾಹ್ನ 3 ಗಂಟೆಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಾರಂತರ ಜನ್ಮದಿನದ ಅಂಗವಾಗಿ ಅಕ್ಟೋಬರ್ 1ರಿಂದ 10ರ ವರೆಗೆ ಸಾಹಿತ್ಯ-ಸಾಂಸ್ಕತಿಕ ಕಾರ್ಯಕ್ರಮಗಳು ಆನ್‌ಲೈನ್‌ ಮೂಲಕ ನಡೆಯಲಿವೆ. ಕಾರಂತ ಥೀಮ್ ಪಾರ್ಕಿನ ಫೇಸ್‌ಬುಕ್ ಮತ್ತು ಯೂಟ್ಯೂಬ್ ಚಾನೆಲ್‌ಗಳಲ್ಲಿ ಇವುಗಳನ್ನು ವೀಕ್ಷಿಸಬಹುದು ಎಂದು ಶೆಣೈ ವಿವರಿಸಿದರು.


ಗಿರೀಶ್ ಭಾರದ್ವಾಜ್ ಅವರು ಗ್ರಾಮೀಣ ಪ್ರದೇಶಗಳಲ್ಲಿ 130 ತೂಗು ಸೇತುವೆಗಳನ್ನು ನಿರ್ಮಿಸಿದ್ದಾರೆ. ಸಮಾಜಸೇವೆಯಲ್ಲೂ ತೊಡಗಿಸಿಕೊಂಡಿದ್ದಾರೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



0 Comments

Post a Comment

Post a Comment (0)

Previous Post Next Post