ತುಮಕೂರು: ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಕ್ರಮಕೈಗೊಳ್ಳಲಾಗುವುದು ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.
ಆರ್ಥಿಕ ಪರಿಸ್ಥಿತಿ ಸುಧಾರಿಸಿಕೊಂಡು ರಾಜ್ಯದಲ್ಲಿ ಎಲ್ಲಾ ಜಾತಿಯ ವಿದ್ಯಾರ್ಥಿಗಳಿಗೆ ಶೀಘ್ರವೇ ಉಚಿತ ಬಸ್ ಪಾಸ್ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿರಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಲಾಗಿದೆ.
ಕೋವಿಡ್ ನಿಂದ ಆರ್ಥಿಕ ಸಂಕಷ್ಟದಲ್ಲಿರುವ ಎಲ್ಲಾ ಜಾತಿಯ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲಾಗಿಲ್ಲ.
ಆರ್ಥಿಕ ಪರಿಸ್ಥಿತಿ ಸುಧಾರಿಸಿಕೊಂಡು ಶೀಘ್ರದಲ್ಲಿಯೇ ಎಲ್ಲಾ ಜಾತಿಯ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
إرسال تعليق