ಬೆಂಗಳೂರು : ರಾಜ್ಯದ ಗ್ರಾಮಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ಸದಸ್ಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ನೀಡಿದ್ದು, ಗ್ರಾ.ಪಂ ಸದಸ್ಯರ ಗೌರವಧನ ಹೆಚ್ಚಳ ಮಾಡಲಾಗುವುದು ಎಂದು ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಮೇಲ್ಮನೆಯಲ್ಲಿ ಈ ಬಗ್ಗೆ ಮಾತನಾಡಿದ ಕೋಟಾ ಶ್ರೀನಿವಾಸ ಪೂಜಾರಿ, ರಾಜ್ಯದ ಗ್ರಾಮಪಂಚಾಯಿತಿ ಸದಸ್ಯರ ಗೌರವಧನವನ್ನು 2010, 2014 ಮತ್ತು 2017 ರಲ್ಲಿ ಪರಿಷ್ಕರಣೆ ಮಾಡಲಾಗಿದೆ.
ಅಧ್ಯಕ್ಷರಿಗೆ 3 ಸಾವಿರ ರೂ. ಉಪಾಧ್ಯಕ್ಷರಿಗೆ 2 ಸಾವಿರ ರೂ. ಸದಸ್ಯರಿಗೆ ಒಂದು ಸಾವಿರ ರೂ. ಗೌರವಧನವಿದ್ದು, ದುಪ್ಪಟ್ಟಾದರೆ ಕ್ರಮವಾಗಿ 6 ಸಾವಿರ ರೂ. 4 ಸಾವಿರ ರೂ. 2 ಸಾವಿರ ರೂ.ಗೆ ಏರಿಕೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.
ಹಾಗೆ ಗ್ರಾಮಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಉಚಿತ ಬಸ್ ಪಾಸ್ ನೀಡಲು ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
إرسال تعليق