ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕೆ ಎಸ್ ಆರ್ ಟಿಸಿ ನೌಕರ ಆತ್ಮಹತ್ಯೆ ಗೆ ಶರಣು

ಕೆ ಎಸ್ ಆರ್ ಟಿಸಿ ನೌಕರ ಆತ್ಮಹತ್ಯೆ ಗೆ ಶರಣು

 


ಶಿವಮೊಗ್ಗ: ಕೊರಳಿಗೆ ಹೂವಿನ ಹಾರ ಹಾಕಿಕೊಂಡೆ ಕೆಎಸ್‌ ಆರ್ ಟಿಸಿ ನೌಕರನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಭದ್ರಾವತಿಯ ಹೊಸ ಸಿದ್ದಾಪುರದಲ್ಲಿ ನಡೆದಿದೆ.


ಮೃತ ವ್ಯಕ್ತಿಯನ್ನು ಗಂಗಾಧರ್ (46) ವರ್ಷ ಎಂದು ಗುರುತಿಸಲಾಗಿದ್ದು, ಶಿವಮೊಗ್ಗದಲ್ಲಿ ಕೆಎಸ್‌ಆರ್ಟಿಸಿ ಬಸ್ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದರು.


ಹೊಸ ಸಿದ್ದಾಪುರದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಪಡಿಸಲಾಗಿದೆ.


ನೇಣಿಗೆ ಶರಣಾಗುವ ಮುನ್ನವೇ ತಾವೇ ಹೂವಿನ ಹಾರ ಹಾಕಿಕೊಂಡಿದ್ದು, ಹಾರದ ಜೊತೆಗೆ ಹೊಸ ಶರ್ಟ್ ಧರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 


ಈ ಬಗ್ಗೆ ಭದ್ರಾವತಿಯ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 تعليقات

إرسال تعليق

Post a Comment (0)

أحدث أقدم