ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಕೇಸ್ ಕಡಿಮೆಯಾಗಿದ್ದು, ಈ ಕಾರಣದಿಂದ ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಾದ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ದೇವರ ದರ್ಶನ ಹಾಗೂ ಸೇವೆಗಳಿಗೆ ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.
ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಆಡಳಿತ ಮಂಡಳಿ, ಅರ್ಚಕರು, ಸಿಬ್ಬಂದಿ ಸೇರಿ ಎಲ್ಲರೂ ಪ್ರತಿ 15 ದಿನಗಳಿಗೊಮ್ಮೆ ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸಿ ನೆಗೆಟಿವ್ ವರದಿ ಪಡೆದುಕೊಳ್ಳಬೇಕು. ಹಾಗೆಯೇ ದೇಗುಲದಲ್ಲಿ ಕೋವಿಡ್ ಲಸಿಕಾ ಕೇಂದ್ರ ತೆರೆಯಬೇಕು.
ವಾರಾಂತ್ಯದ ನಿರ್ಬಂಧಗಳನ್ನು ರದ್ದುಗೊಳಿಸಲಾಗಿದೆ. ಆದರೆ, ದೇಗುಲಗಳಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಶನಿವಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
إرسال تعليق