ಬೆಂಗಳೂರು: ಗ್ಯಾಸ್ ಗೀಸರ್ ಸೋರಿಕೆಯಾಗಿ ಎಂಬಿಬಿಎಸ್ ವಿದ್ಯಾರ್ಥಿನಿ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆಯೊಂದು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ನಡೆದಿದೆ.
ಸಂಪದ ಮೃತಪಟ್ಟ ದುರ್ದೈವಿ. ಸ್ನಾನಕ್ಕೆ ತೆರಳಿದ್ದಾಗ ವಿದ್ಯಾರ್ಥಿನಿ ಕಾರ್ಬನ್ ಮಾನಾಕ್ಸೈಡ್ ಸೋರಿಕೆಯಾಗಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಬಾತ್ ರೂಂಗೆ ಹೋಗಿದ್ದ ವಿದ್ಯಾರ್ಥಿನಿ 2 ಗಂಟೆಯಾದರೂ ಹೊರಬಾರದಿರುವ ಹಿನ್ನೆಲೆ ಇದರಿಂದ ಗಾಬರಿಗೊಂಡ ಸ್ನೇಹಿತೆಯರು ಬಾತ್ ರೂಮ್ ಬಾಗಿಲು ಒಡೆದು ನೋಡಿದಾಗ ಪ್ರಜ್ಞೆ ತಪ್ಪಿ ಬಿದ್ದಿರುವುದು ಕಂಡಿತ್ತು.
ಕೂಡಲೇ ವಿದ್ಯಾರ್ಥಿನಿ ಸಂಪದಾಳನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಮಾರ್ಗಮಧ್ಯೆಯೇ ಆಕೆ ಸಾವನ್ನಪ್ಪಿದ್ದಾಳೆ.
ಈ ಬಗ್ಗೆ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
إرسال تعليق