ಸುಳ್ಯ ತಾಲೂಕು ಅಮರ ಮುಡ್ನೂರು ಗ್ರಾಮದ ದೊಡ್ಡತೋಟ ಸಂಕಬಿತ್ಲಿನವರಾದ ಮಂಗಳೂರಿನಲ್ಲಿ ಕುಟುಂಬ ವೈದ್ಯರಾಗಿ ಕಳೆದ 40 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಡಾ ಜಿ ಕೆ ಭಟ್ ಸಂಕಬಿತ್ಲು (ಹಿರಿಯ ರಾಜ್ಯ ಉಪಾಧ್ಯಕ್ಷರು, ಭಾರತೀಯ ವೈದ್ಯಕೀಯ ಸಂಘ, ಕರ್ನಾಟಕ ವಲಯ ಹಾಗೂ ಕೇಂದ್ರೀಯ ಕಾರ್ಯಕಾರಿ ಸಮಿತಿ ಸದಸ್ಯರು) ಹಾಗೂ ಹಿರಿಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ ಉಷಾ ಜಿ ಕೆ ಭಟ್ ದಂಪತಿಗಳ ಪುತ್ರ ಡಾ ವಿಕ್ರಮ್ ಜಿ ಕೆ ಭಟ್ ರವರು ಕರ್ನಾಟಕದ ರಾಜೀವಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಎಂ ಎಸ್ (ಎಲುಬು ಮತ್ತು ಕೀಲು ವಿಭಾಗ) ಅಂತಿಮ ವರ್ಷದ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಇವರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೀನಿಯರ್ ರೆಸಿಡೆಂಟ್ ಡಾಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment