ಮೂಡುಬಿದಿರೆ: ಪ್ರಪಂಚದಾದ್ಯಂತ ಸಮರ್ಪಕವಾದ ಕೋವಿಡ್ ನಿರ್ವಹಣೆಯಲ್ಲಿ ಭಾರತ ಪ್ರಮುಖ ಪಾತ್ರ ವಹಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ ನಡೆದ ಕರ್ನಾಟಕ ಸರಕಾರದ ಬೃಹತ್ ಲಸಿಕಾ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದ ಅವರು, ವ್ಯಕ್ತಿಕೀರ್ತಿಗಿಂತ ರಾಷ್ಟ್ರಕೀರ್ತಿ ಮುಖ್ಯಯೆಂಬ ಉದ್ದೇಶದಿಂದ ಪ್ರಧಾನಿ ಮೋದಿ ನೇತೃತ್ವದ ಸರಕಾರ ಜನಸಾಮಾನ್ಯರಿಗೆ ತ್ವರಿತ ಸಹಕಾರ ನೀಡುತ್ತಿದೆ. ದೇಶದ ಜನರಿಗೆ ಲಸಿಕೆ ಒದಗಿಸುವುದರೊಂದಿಗೆ ವಿದೇಶಗಳಿಗೂ ಪೂರೈಕೆ ಮಾಡುತ್ತಿರುವುದು ಉತ್ತಮ ಬೆಳವಣಿಗೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಜನರಿಗೆ ಲಸಿಕೆ ನೀಡುವ ಗುರಿ ಹೊಂದಿದ್ದೇವೆ ಎಂದು ಹೇಳಿದರು.
ಅಭಿಯಾನದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ, ಎಂಸಿಎಸ್ ಬ್ಯಾಂಕ್ ಅಧ್ಯಕ್ಷ ಬಾಹುಬಲಿ ಪ್ರಸಾದ್, ಮೂಡಬಿದಿರೆ ಪುರಸಭೆ ಅಧ್ಯಕ್ಷ ಪ್ರಸಾದ್ ಕುಮಾರ್, ಮೂಡ ಅಧ್ಯಕ್ಷ ಮೇಘನಾಥ್ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಅಭಿಯಾನದ ಸುವ್ಯವಸ್ಥೆ ಕಾಪಾಡಲು ಟೋಕನ್ ವ್ಯವಸ್ಥೆ ಕಲ್ಪಿಸಲಾಗಿತ್ತು, ಲಸಿಕೆ ಪಡೆದ ಬಳಿಕ ವಿಶ್ರಮಿಸಲು ವಿಶ್ರಾಂತಿ ವ್ಯವಸ್ಥೆ ಕೂಡ ಮಾಡಲಾಗಿತ್ತು. ಸಾಮಾಜಿಕ ಅಂತರ ಕಾಪಾಡುವ ಮೂಲಕ ವ್ಯವಸ್ಥಿತ ಅಭಿಯಾನವನ್ನು ನಡೆಸಲು ಆಳ್ವಾಸ್ ಸಂಸ್ಥೆಯ ಸಿಬ್ಬಂದಿಗಳು, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳು ಸಹಕರಿಸಿದರು. ಸರಕಾರಿ ವೈದ್ಯರ ತಂಡ ವೈದ್ಯಕೀಯ ಸೇವೆ ಒದಗಿಸಿತು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق