ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಎನ್.ಎಸ್.ಎಸ್ ವಿದ್ಯಾರ್ಥಿಗಳು ಸಮಾಜಕ್ಕೆ ಮಾದರಿ ಎಂದೆನಿಸಬೇಕು: ಡಾ. ವಾಮನ್ ರಾವ್

ಎನ್.ಎಸ್.ಎಸ್ ವಿದ್ಯಾರ್ಥಿಗಳು ಸಮಾಜಕ್ಕೆ ಮಾದರಿ ಎಂದೆನಿಸಬೇಕು: ಡಾ. ವಾಮನ್ ರಾವ್



ನಿಟ್ಟೆ: 'ಸಮಾಜದ ಏಳಿಗೆಯ ಪ್ರಕ್ರಿಯೆಯಲ್ಲಿ ನನ್ನ ಪಾತ್ರವೇನಿದೆ ಎಂಬುದನ್ನು ಪ್ರತಿಯೋರ್ವ ಮಾನವನೂ ಚಿಂತಿಸಿ ಬದುಕಬೇಕು. ರಾಷ್ಟ್ರೀಯ ಸೇವಾ ಯೋಜನೆಯ ಆಶಯದಂತೆ ರಾಷ್ಟ್ರಾಭಿವೃದ್ಧಿಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು' ಎಂದು ನಿಟ್ಟೆ ತಾಂತ್ರಿಕ ಕಾಲೇಜಿನ ಬಯೋಟೆಕ್ನಾಲಜಿ ವಿಭಾಗದ ಮುಖ್ಯಸ್ಥ ಡಾ. ವಾಮನ್ ರಾವ್ ಅಭಿಪ್ರಾಯಪಟ್ಟರು.


ಅವರು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಎನ್.ಎಸ್.ಎಸ್ ಘಟಕವು ಇತ್ತೀಚೆಗೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆಯ ‘ಎನ್.ಎಸ್.ಎಸ್ ಡೇ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಅವರು ‘ಹಾರ್ಮೋನಿಯಸ್ ಲಿವಿಂಗ್ ಇನ್ ದ ಎನ್ವಯರ್ಮೆಂಟ್’ ಎಂಬ ವಿಷಯದ ಬಗೆಗೆ ಸವಿವರವಾಗಿ ಮಾತನಾಡಿದರು.


ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್ ಚಿಪ್ಳೂಣ್ಕರ್, ಉಪಪ್ರಾಂಶುಪಾಲ ಡಾ.ಐ ರಮೇಶ್ ಮಿತ್ತಂತಾಯ, ನಿಟ್ಟೆ ಎನ್.ಎಸ್.ಎಸ್ ಘಟಕದ ಮುಖ್ಯಸ್ಥ ಡಾ.ಜನಾರ್ದನ ನಾಯಕ್, ಎನ್.ಎಸ್.ಎಸ್ ವಿದ್ಯಾರ್ಥಿ ನಾಯಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم